ಬುಧವಾರ, ಏಪ್ರಿಲ್ 1, 2020
19 °C

ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ರಾಬರ್ಟ್‌ ವಾದ್ರಾಅರ್ಜಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಉದ್ಯಮಿ ರಾಬರ್ಟ್‌ ವಾದ್ರಾ, ತಮ್ಮ ವೈದ್ಯಕೀಯ ಚಿಕಿತ್ಸೆ ಮತ್ತು ವ್ಯಾಪಾರ ಉದ್ದೇಶಗಳಿಗಾಗಿ ವಿದೇಶ ಪ್ರವಾಸಕ್ಕೆ ಅನುಮತಿ ನೀಡಬೇಕೆಂದು ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. 

ಹಿರಿಯ ವಕೀಲೆ ಕೆ.ಟಿ.ಎಸ್‌.ತುಳಸಿ ಅವರು ಡಿ.9ರಿಂದ ಎರಡು ವಾರಗಳ ಕಾಲ ವಾದ್ರಾ ಅವರ ಸ್ಪೇನ್‌ ಪ್ರವಾಸಕ್ಕೆ ಅನುಮತಿ ನೀಡುವಂತೆ ನ್ಯಾಯಾಧೀಶ ಅರವಿಂದ್‌ ಕುಮಾರ್ ಅವರನ್ನು ಕೋರಿದ್ದಾರೆ. ಕೋರ್ಟ್‌ ಸೋಮವಾರದ ಒಳಗೆ ಈ ಬಗ್ಗೆ ವಿವರಣೆ ನೀಡುವಂತೆ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿದೆ. ‌

ಕಳೆದ ಜೂನ್‌ನಲ್ಲೂ ಅಮೆರಿಕ ಮತ್ತು ನೆದರ್ಲೆಂಡ್‌ ಪ್ರವಾಸಕ್ಕೆ ಅನುಮತಿ ಕೋರಿ ವಾದ್ರಾ ಅರ್ಜಿ ಸಲ್ಲಿಸಿದ್ದರು. ಸಾಕ್ಷ್ಯ ನಾಶದ ಆತಂಕವನ್ನು ಜಾರಿ ನಿರ್ದೇಶನಾಲಯ (ಇ.ಡಿ) ವ್ಯಕ್ತಪಡಿಸಿತ್ತು. ಹೀಗಾಗಿ ಕೋರ್ಟ್ ಅನುಮತಿ ನೀಡಿರಲಿಲ್ಲ. ಲಂಡನ್‌ನಲ್ಲಿ ಆಸ್ತಿ ಖರೀದಿಸುವುದಕ್ಕಾಗಿ ಹಣ ಅಕ್ರಮ ವರ್ಗಾವಣೆ ಮಾಡಿರುವ ಆರೋಪ ವಾದ್ರಾ ಅವರ ಮೇಲಿದ್ದು ಇ.ಡಿ ಪ್ರಕರಣ ದಾಖಲಿಸಿದೆ.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು