ಭಾನುವಾರ, ಆಗಸ್ಟ್ 1, 2021
26 °C

ಕೇರಳ ಸಿಎಂ ಪುತ್ರಿ ವಿವಾಹದಲ್ಲಿ ಪಾಲ್ಗೊಂಡ ಕೊಲೆ ಪ್ರಕರಣ ಅಪರಾಧಿ; ಬಿಜೆಪಿ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಪುತ್ರಿಯ ಮದುವೆ ಸಮಾರಂಭದಲ್ಲಿ ಕೊಲೆ ಪ್ರಕರಣದ ಅಪರಾಧಿ ಪಾಲ್ಗೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.

ವಿಜಯನ್ ಪುತ್ರಿ ವೀಣಾ ಹಾಗೂ ಡಿವೈಎಫ್‌ಐ ರಾಷ್ಟ್ರೀಯ ಘಟಕ ಅಧ್ಯಕ್ಷ ಮುಹಮ್ಮದ್‌ ರಿಯಾಸ್‌ ಅವರ ವಿವಾಹವು ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕ್ಲಿಫ್ ಹೌಸ್‌ನಲ್ಲಿ ಸೋಮವಾರ ಸರಳವಾಗಿ ನಡೆಯಿತು.

ಮದುವೆ ನಡೆದ ಕೆಲವೇ ಹೊತ್ತಿನಲ್ಲಿ ಬಿಜೆಪಿ ವಕ್ತಾರ ಸಂದೀಪ್‌ ಜಿ. ವಾರ‍್ಯರ್, ಮದುವೆಯ ಫೋಟೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿ, ‘ತ್ರಿಶ್ಯೂರ್‌ನಲ್ಲಿ ನಡೆದ ಆರ್‌ಎಸ್‌ಎಸ್‌ ಕಾರ್ಯಕರ್ತರೊಬ್ಬರ ಕೊಲೆ ಪ್ರಕರಣದ ಅಪರಾಧಿ ಮುಹಮ್ಮದ್‌ ಹಾಶಿಂ ಮದುವೆಯಲ್ಲಿ ಪಾಲ್ಗೊಂಡಿದ್ದಾರೆ’ ಎಂದು ಆರೋಪಿಸಿದ್ದಾರೆ.

ಮುಹಮ್ಮದ್‌ ಹಾಶಿಂ, ರಿಯಾಸ್‌ ಅವರ ಸಂಬಂಧಿ ಎಂದು ಮುಖ್ಯಮಂತ್ರಿಗಳ ಕಚೇರಿ ಸ್ಪಷ್ಟನೆ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು