ಮಂಗಳವಾರ, ಜೂನ್ 2, 2020
27 °C

ಸೋಂಕಿನಿಂದ ಮೃತಪಟ್ಟರೆ ವೈದ್ಯಕೀಯ ಸಿಬ್ಬಂದಿ ಕುಟುಂಬಕ್ಕೆ ₹1 ಕೋಟಿ: ಕೇಜ್ರಿವಾಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡುವ ವೈದ್ಯಕೀಯ ಸಿಬ್ಬಂದಿ ಸೋಂಕಿನಿಂದ ಮೃತಪಟ್ಟರೆ ಅವರ ಕುಟುಂಬಕ್ಕೆ ₹ 1 ಕೋಟಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬುಧವಾರ ಘೋಷಿಸಿದ್ದಾರೆ.  

ಮೂವರು ವೈದ್ಯರಿಗೆ ಕೊರೊನೊ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯರೊಂದಿಗೆ ಕೇಜ್ರಿವಾಲ್‌ ಸಮಾಲೋಚನೆ ನಡೆಸಿದರು. 

‘ನಿಮ್ಮ ಸೇವೆ ಯಾವ ಸೈನಿಕರಿಗಿಂತ ಕಡಿಮೆಯಿಲ್ಲ. ಖಾಸಗಿ ಮತ್ತು ಸರ್ಕಾರಿ ವೈದ್ಯರು, ನರ್ಸ್‌ಗಳು ಮತ್ತು ಸ್ವಚ್ಛತಾ ಕಾರ್ಮಿಕರಿಗೂ ಈ ಪರಿಹಾರ ಅನ್ವಯವಾಗಲಿದೆ’ ಎಂದು ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು