ಶುಕ್ರವಾರ, ಜೂಲೈ 3, 2020
21 °C

ಜಮ್ಮು | ಆರ್‌ಎಸ್‌ಎಸ್‌ ಕಾರ್ಯಕರ್ತನ ಕೊಲೆ ಆರೋಪ: ಹಿಜ್ಬುಲ್ ಉಗ್ರನ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಜಮ್ಮು: ಆರ್‌ಎಸ್‌ಎಸ್‌ ಕಾರ್ಯಕರ್ತ ಮತ್ತು ಅವರ ಖಾಸಗಿ ಭದ್ರತಾ ಅಧಿಕಾರಿಯನ್ನು ಕೊಂದಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮಂಗಳವಾರ ರಾತ್ರಿ ಜಿಲ್ಲೆಯ ಹಂಜಾಲಾ ಪ್ರದೇಶದಲ್ಲಿ ಬಂಧಿಸಿದೆ.

ಬಂಧಿತ ಉಗ್ರನನ್ನು ರುಸ್ತುಂ ಅಲಿ ಎಂದು ಗುರುತಿಸಲಾಗಿದೆ. ಆರ್‌ಎಸ್‌ಎಸ್‌ ಕಾರ್ಯಕರ್ತ ಚಂದ್ರಕಾಂತ ಶರ್ಮಾ ಮತ್ತು ಅವರ ಖಾಸಗಿ ಭದ್ರತಾ ಅಧಿಕಾರಿಯನ್ನು ಕೊಲೆ ಮಾಡಿದ ಆರೋಪವನ್ನು ಚಾರ್ಜ್‌ಶೀಟ್‌ನಲ್ಲಿ ನಮೂದಿಸಲಾಗಿದೆ.

ಜಮ್ಮು ವಲಯದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಾಯಕರ ಕೊಲೆಗೆ ಸಂಬಂಧಿಸಿದಂತೆ ನಾಸಿ ಅಹಮದ್ ಶೇಖ್, ನಿಶಾದ್ ಅಹಮದ್ ಮತ್ತು ಆಜಾದ್ ಹುಸೇನ್ ಅವರನ್ನು ಪೊಲೀಸರು ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಬಂಧಿಸಿದ್ದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಿಲ್ ಪವಾರ್ ಅವರನ್ನು 2018ರಲ್ಲಿ ಕೊಲೆ ಮಾಡಲಾಗಿತ್ತು. ಆರ್‌ಎಸ್‌ಎಸ್‌ನ ಹಿರಿಯ ಕಾರ್ಯಕರ್ತ ಶರ್ಮಾ ಮತ್ತು ಅವರ ಭದ್ರತಾ ಅಧಿಕಾರಿಯನ್ನು 2019ರ ಏಪ್ರಿಲ್‌ನಲ್ಲಿ ಕೊಲೆ ಮಾಡಲಾಗಿತ್ತು. ಎರಡೂ ಕೊಲೆಗಳನ್ನು ಖಂಡಿಸಿ ಜಮ್ಮುವಿನ ಕಿಶ್ತ್‌ವಾರ್ ಪ್ರದೇಶದಲ್ಲಿ ಪ್ರತಿಭಟನೆಗಳು ನಡೆದಿದ್ದವು.

ಕಿಶ್ತ್‌ವಾರ್ ಪ್ರದೇಶದಲ್ಲಿ ಉಗ್ರಗಾಮಿ ಚಟುವಟಿಕೆಗಳಿಗೆ ಮತ್ತೆ ಚಾಲನೆ ನೀಡಲು ಹಿಜ್ಬುಲ್ ಮುಜಾಹಿದ್ದೀನ್ ಉಗ್ರಗಾಮಿ ಸಂಘಟನೆಯ ನಾಯಕ ಜಹಂಗೀರ್ ಸರೂರಿ ಯತ್ನಿಸುತ್ತಿದ್ದಾನೆ. ಈ ಯತ್ನದ ಭಾಗವಾಗಿ ಈ ಕೊಲೆಗಳು ನಡೆದಿವೆ ಎಂದು ಪೊಲೀಸರು ಶಂಕಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು