ಗುರುವಾರ , ಸೆಪ್ಟೆಂಬರ್ 19, 2019
24 °C

ಅರುಣ್ ಜೆಟ್ಲಿ ಆರೋಗ್ಯ ವಿಚಾರಿಸಲು ಏಮ್ಸ್‌ಗೆ ಭೇಟಿ ನೀಡಿದ ಮೋಹನ್‌ ಭಾಗವತ್

Published:
Updated:

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಅರುಣ್‌ ಜೇಟ್ಲಿ(66) ಅವರ ಆರೋಗ್ಯ ವಿಚಾರಿಸಲು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ದೆಹಲಿಯ ಏಮ್ಸ್‌ಗೆ ಭಾನುವಾರ ಭೇಟಿ ನೀಡಿದರು.

ಜೇಟ್ಲಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಆಗಸ್ಟ್ 9 ರಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಆಸ್ಟ್ರತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

ರಾಷ್ಟ್ರಪತಿ ರಾಮನಾಥ ಕೋವಿಂದ್, ಗೃಹ ಸಚಿವ ಅಮೀತ್ ಶಾ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶುಕ್ರವಾರ ಭೇಟಿ ನೀಡಿದ್ದರು.

Post Comments (+)