ಆರ್‌ಎಸ್‌ಎಸ್‌ ಉಪನ್ಯಾಸಕ್ಕೆ ರಾಹುಲ್ ಗಾಂಧಿಗೆ ಆಹ್ವಾನ?

7

ಆರ್‌ಎಸ್‌ಎಸ್‌ ಉಪನ್ಯಾಸಕ್ಕೆ ರಾಹುಲ್ ಗಾಂಧಿಗೆ ಆಹ್ವಾನ?

Published:
Updated:

ನವದೆಹಲಿ: ಆರ್‌ಎಸ್‌ಎಸ್‌ ಹಮ್ಮಿಕೊಂಡಿರುವ ಸರಣಿ ಉಪನ್ಯಾಸ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಭಿನ್ನ ಸಿದ್ಧಾಂತಗಳನ್ನು ಹೊಂದಿರುವ ಜನರನ್ನು ಕಾರ್ಯಕ್ರಮಕ್ಕೆ ಅಹ್ವಾನಿಸುವುದು ಉದ್ದೇಶವಾಗಿದೆ. ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರನ್ನೂ ಆಹ್ವಾನಿಸುವ ಸಾಧ್ಯತೆ ಇದೆ. 

ಅರಬ್‌ ರಾಷ್ಟ್ರಗಳಲ್ಲಿ ಸಕ್ರಿಯವಾಗಿರುವ ಮುಸ್ಲಿಂ ಮೂಲಭೂತವಾದಿ ಸಂಘಟನೆ ಮುಸ್ಲಿಂ ಬ್ರದರ್‌ಹುಡ್‌ ಮತ್ತು ಆರ್‌ಎಸ್‌ಎಸ್‌ ಒಂದೇ ಎಂದು ರಾಹುಲ್‌ ಹೇಳಿರುವುದನ್ನು ಆರ್‌ಎಸ್‌ಎಸ್ ಕಟುವಾಗಿ ಟೀಕಿಸಿದೆ. ಅದೇ ಸಂದರ್ಭದಲ್ಲಿ ಅವರನ್ನು ಉಪನ್ಯಾಸ ಸರಣಿಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: ಆರ್‌ಎಸ್‌ಎಸ್‌ನಿಂದ ಬಹುಸಂಸ್ಕೃತಿ ಬುಡಮೇಲು–ರಾಹುಲ್‌; ರಾಹುಲ್‌ ಅಪ್ರಬುಧ್ಧ–ಬಿಜೆಪಿ​

‘ಇದೇ ಮೊದಲ ಬಾರಿಗೆ ಆರ್‌ಎಸ್‌ಎಸ್‌ ಮೂರು ದಿನಗಳ ಸರಣಿ ಉಪನ್ಯಾಸ ಕಾರ್ಯಕ್ರಮವನ್ನು ಸಂಘಟಿಸಿದೆ. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಉಪನ್ಯಾಸ ನೀಡಲಿದ್ದಾರೆ’ ಎಂದು ಆರ್‌ಎಸ್‌ಎಸ್‌ ಪ್ರಚಾರ ಪ್ರಮುಖ ಅರುಣ್‌ ಕುಮಾರ್‌ ತಿಳಿಸಿದ್ದಾರೆ. ರಾಹುಲ್‌ ಅವರನ್ನು ಆಹ್ವಾನಿಸಲಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಯಾರನ್ನೆಲ್ಲ ಆಹ್ವಾನಿಸಬೇಕು ಎಂಬ ಪಟ್ಟಿ ಅಂತಿಮವಾಗಿಲ್ಲ ಎಂದಿದ್ದಾರೆ.

ಸೆಪ್ಟೆಂಬರ್‌ 17ರಿಂದ 19ರವರೆಗೆ ದೆಹಲಿಯ ವಿಜ್ಞಾನ ಭವನದಲ್ಲಿ ಸರಣಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ‘ಭಾರತದ ಭವಿಷ್ಯ: ಆರ್‌ಎಸ್‌ಎಸ್‌ ದೃಷ್ಟಿಕೋನ’ ಎಂಬ ವಿಷಯದ ಬಗ್ಗೆ ಭಾಗವತ್‌ ಮಾತನಾಡಲಿದ್ದಾರೆ

ನಾಗಪುರದಲ್ಲಿರುವ ಆರ್‌ಎಸ್‌ಎಸ್‌ ಕೇಂದ್ರ ಕಚೇರಿಯಲ್ಲಿ ಜೂನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಕಾಂಗ್ರೆಸಿಗ ಮತ್ತು ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಭಾಗಿಯಾಗಿದ್ದರು. ಅವರು ಭಾಗವಹಿಸಿದ್ದನ್ನು ಕಾಂಗ್ರೆಸ್‌ ಪಕ್ಷ ಟೀಕಿಸಿತ್ತು. ಇತ್ತೀಚೆಗೆ ರಾಹುಲ್‌ ಅವರು ವಿದೇಶಕ್ಕೆ ಭೇಟಿ ನೀಡಿದ್ದಾಗ ಆರ್‌ಎಸ್‌ಎಸ್‌ ಅನ್ನು ತೀವ್ರವಾಗಿ ಟೀಕಿಸಿದ್ದರು. 

ಇನ್ನಷ್ಟು..

ಸಂವಿಧಾನಾತ್ಮಕ ದೇಶಭಕ್ತಿಯ ಪ್ರಣವ್‌ ಪಾಠ ಅನುರಣಿಸಲಿ

ಸಿಖ್ ನರಮೇಧದಲ್ಲಿ ಕಾಂಗ್ರೆಸ್ ಭಾಗಿಯಾಗಿಲ್ಲ: ರಾಹುಲ್ ಗಾಂಧಿ

ಆರ್‌ಎಸ್‌ಎಸ್‌ ಕೈಯಲ್ಲಿದೆ ರಾಜ್ಯಪಾಲರ ಅಧಿಕಾರ; ರಾಹುಲ್‌ ಗಾಂಧಿ ಆರೋಪ

ಬರಹ ಇಷ್ಟವಾಯಿತೆ?

 • 7

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !