ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಎಸ್‌ಎಸ್‌ ವಿಜಯ ದಶಮಿ ಸಮಾರಂಭಕ್ಕೆ ಕೈಲಾಶ್‌ ಸತ್ಯಾರ್ಥಿಗೆ ಆಹ್ವಾನ

Last Updated 17 ಅಕ್ಟೋಬರ್ 2018, 14:14 IST
ಅಕ್ಷರ ಗಾತ್ರ

ನಾಗಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಗುರುವಾರ ನಾಗಪುರದಲ್ಲಿ ಹಮ್ಮಿಕೊಂಡಿರುವ ವಿಜಯದಶಮಿ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ನೊಬೆಲ್‌ ಪ್ರಶಸ್ತಿ ಪುರಸ್ಕೃತ ಸಾಮಾಜಿಕ ಕಾರ್ಯಕರ್ತ ಕೈಲಾಶ್‌ ಸತ್ಯಾರ್ಥಿ ಅವರನ್ನು ಆಹ್ವಾನಿಸಿದೆ.

ಸಮಾರಂಭವು ಬೆಳಿಗ್ಗೆ 7.40ಕ್ಕೆ ರೇಶಿಂಬಾಗ್‌ ಮೈದಾನದಲ್ಲಿ ಆರಂಭವಾಗಲಿದೆ. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಪ್ರಸಕ್ತ ಸನ್ನಿವೇಶ ಮತ್ತು ಸಂಘದ ಮುಂದಿನ ವರ್ಷದ ಕಾರ್ಯಸೂಚಿ ಕುರಿತು ಮುಖ್ಯ ಭಾಷಣ ಮಾಡುವರು. ವಿಜಯ ದಶಮಿಯು ಆರ್‌ಎಸ್‌ಎಸ್‌ನ ಮುಖ್ಯ ಕಾರ್ಯಕ್ರಮಗಳಲ್ಲಿ ಒಂದಾಗಿದೆ.

ಆರ್‌ಎಸ್‌ಎಸ್‌ ಆಗಸ್ಟ್‌ನಲ್ಲಿ ದೆಹಲಿಯಲ್ಲಿ ಆಯೋಜಿಸಿದ್ದ ಸರಣಿ ಉಪನ್ಯಾಸ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಆಹ್ವಾನಿಸಲಾಗಿತ್ತು. ಆದರೆ, ರಾಹುಲ್ ಅವರು ಕಾರ್ಯಕ್ರಮಕ್ಕೆ ಹಾಜರಾಗಿರಲಿಲ್ಲ. ಜೂನ್‌ 7ರಂದು ನಾಗಪುರದಲ್ಲಿ ನಡೆದಿದ್ದ ‘ಸಂಘ ಶಿಕ್ಷ ವರ್ಗ’ ಶಿಬಿರದಲ್ಲಿ ಮಾಜಿ ರಾಷ್ಟ್ರಪತಿ, ಕಾಂಗ್ರೆಸ್‌ನ ಹಿರಿಯ ನಾಯಕ ಪ್ರಣವ್ ಮುಖರ್ಜಿ ಭಾಗವಹಿಸಿ ಭಾಷಣ ಮಾಡಿದ್ದರು. ಇದು ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT