ಮಂಗಳವಾರ, ಆಗಸ್ಟ್ 11, 2020
23 °C

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌ಗೆ ಆರ್‌ಎಸ್‌ಎಸ್ ಬೆಂಬಲ: ಮಮತಾ ಬ್ಯಾನರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ರಾಜ್ಯದ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಾಗೂ ಆರ್‌ಎಸ್‌ಎಸ್‌ ಜೊತೆಯಾಗಿ ಕೆಲಸ ಮಾಡುತ್ತಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. 

ಕಳೆದ ವರ್ಷ ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನೂ ಮಮತಾ ಟೀಕಿಸಿದ್ದಾರೆ.  

‘ಬೆಹರಾಂಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಅಧೀರ್ ರಂಜನ್‌ ಚೌಧರಿ ಹಾಗೂ ಪ್ರಣವ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ಪ್ರತಿನಿಧಿಸುತ್ತಿರುವ ಜಂಗೀಪುರ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಆರ್‌ಎಸ್‌ಎಸ್ ಬೆಂಬಲ ಇದೆ’ ಎಂದು ಆರೋಪಿಸಿದ್ದಾರೆ. 

ಅಭಿಜಿತ್ ಮುಖರ್ಜಿ ಜಂಗೀಪುರದ ಹಾಲಿ ಸಂಸದ. ಈ ಬಾರಿಯೂ ಕಾಂಗ್ರೆಸ್ ಟಿಕೆಟ್‌ನಡಿ ಸ್ಪರ್ಧಿಸಿರುವ ಅಭಿಜಿತ್ ಗೆಲುವಿಗೆ ಆರ್‌ಎಸ್‌ಎಸ್ ಕಾರ್ಯೋನ್ಮುಖವಾಗಿದೆ ಎಂದು ಮಮತಾ ದೂರಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು