ಮಂಗಳವಾರ, ಸೆಪ್ಟೆಂಬರ್ 24, 2019
29 °C

ಸರ್ಕಾರಿ ಸ್ವಾಮ್ಯದ 18 ಬ್ಯಾಂಕ್‌ | 3 ತಿಂಗಳಲ್ಲಿ ₹ 31,899 ಕೋಟಿ ವಂಚನೆ

Published:
Updated:

ಇಂದೋರ್‌: ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ 18 ಬ್ಯಾಂಕ್‌ಗಳ 2,480 ಪ್ರಕರಣಗಳಲ್ಲಿ ₹ 31,899 ಕೋಟಿ ಮೊತ್ತದ ವಂಚನೆ ನಡೆದಿದೆ.  ಒಟ್ಟಾರೆ ವಂಚನೆಯ ಮೊತ್ತದಲ್ಲಿ ಭಾರತೀಯ ಸ್ಟೇಟ್‌ ಬ್ಯಾಂಕ್‌ನ (ಎಸ್‌ಬಿಐ) ಪಾಲು ಶೇ 38ರಷ್ಟಿದೆ.

ಮಧ್ಯಪ್ರದೇಶದ ನೀಮುಚ್ ನಗರದ ಆರ್‌ಟಿಐ ಕಾರ್ಯಕರ್ತ ಚಂದ್ರಶೇಖರ್ ಗೌರ್‌ ಅವರು  ಆರ್‌ಟಿಐ ಅಡಿ ಅರ್ಜಿ ಸಲ್ಲಿಸಿ, ಆರ್‌ಬಿಐನ ಹಿರಿಯ ಅಧಿಕಾರಿಯೊಬ್ಬರಿಂದ ಈ ಮಾಹಿತಿ ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ.

ವಂಚನೆ ಸ್ವರೂಪ ಮತ್ತು ಬ್ಯಾಂಕ್‌ ಅಥವಾ ಗ್ರಾಹಕರಿಗೆ ಎಷ್ಟು ಪ್ರಮಾಣದಲ್ಲಿ ನಷ್ಟ ಆಗಿದೆ ಎನ್ನುವ ವಿವರಗಳನ್ನು ಆರ್‌ಬಿಐ ನೀಡಿಲ್ಲ. ಯುನೈಟೆಡ್‌ ಬ್ಯಾಂಕ್‌ ಆಫ್‌ ಇಂಡಿಯಾ, ಕಾರ್ಪೊರೇಷನ್‌ ಬ್ಯಾಂಕ್‌, ಇಂಡಿಯನ್ ಓವರ್‌ಸೀಸ್‌ ಬ್ಯಾಂಕ್‌, ಸಿಂಡಿಕೇಟ್‌ ಬ್ಯಾಂಕ್‌, ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ, ಬ್ಯಾಂಕ್‌ ಆಫ್‌ ಇಂಡಿಯಾ, ಯೂಕೊ ಬ್ಯಾಂಕ್‌, ಬ್ಯಾಂಕ್‌ ಆಫ್‌ ಮಹಾರಾಷ್ಟ್ರ, ಆಂಧ್ರ ಬ್ಯಾಂಕ್‌, ಇಂಡಿಯನ್‌ ಬ್ಯಾಂಕ್‌, ಪಂಜಾಬ್‌ ಮತ್ತು ಸಿಂಧ್‌ ಬ್ಯಾಂಕ್‌ಗಳಲ್ಲಿಯೂ ವಂಚನೆ ನಡೆದಿದೆ.

Post Comments (+)