ಗುರುವಾರ , ಫೆಬ್ರವರಿ 27, 2020
19 °C

ಗಿಲಾನಿ ಆರೋಗ್ಯ ಸ್ಥಿತಿ ಬಗ್ಗೆ ವದಂತಿ; ಕಾಶ್ಮೀರದಲ್ಲಿ ಇಂಟರ್‌ನೆಟ್ ಸೇವೆ ಸ್ಥಗಿತ

ಪಿಟಿಐ Updated:

ಅಕ್ಷರ ಗಾತ್ರ : | |

Syed Ali Shah Geelani

ಕಾಶ್ಮೀರ: ಪ್ರತ್ಯೇಕತಾವಾದಿ ನಾಯಕ ಸೈಯದ್‌ ಅಲಿ ಶಾ ಗಿಲಾನಿ ಅವರ ಆರೋಗ್ಯ ಸ್ಥಿತಿ ಬಗ್ಗೆ ವದಂತಿ ಹರಿದಾಡದಂತೆ ನಿಯಂತ್ರಿಸಲು ಕಾಶ್ಮೀರದಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆಗಳನ್ನು ಗುರುವಾರ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

90ರ ಹರೆಯದ ಗಿಲಾನಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಪೋಸ್ಟ್ ಮಾಡಿದ್ದರು. ಈ ಹಿನ್ನಲೆಯಲ್ಲಿ ಬುಧವಾರ ತಡರಾತ್ರಿ ಇಂಟರ್‌ನೆಟ್ ಸ್ಥಗಿತಗೊಳಿಸಿಲಾಗಿದೆ.

ಅದೇ ವೇಳೆ ಯಾವುದೇ  ಅಹಿತಕರ ಘಟನೆಗಳು ನಡೆಯದಂತೆ ಸೂಕ್ಷ್ಮ ಪ್ರದೇಶಗಳಲ್ಲಿ  ಭದ್ರತಾ ಪಡೆಯನ್ನು ನಿಯೋಜನೆಗೊಳಿಸಲಾಗಿದೆ.

ಆದಾಗ್ಯೂ, ಗಿಲಾನಿಯವರು ಕೆಲ ಕಾಲ ಅನಾರೋಗ್ಯದಿಂದಿದ್ದರು ಆದರೆ ಈಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬ ಹೇಳಿವೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು