ಮೋದಿಗೆ ರಷ್ಯಾದ ಪ್ರತಿಷ್ಠಿತ ಪ್ರಶಸ್ತಿ

ಶುಕ್ರವಾರ, ಏಪ್ರಿಲ್ 26, 2019
36 °C

ಮೋದಿಗೆ ರಷ್ಯಾದ ಪ್ರತಿಷ್ಠಿತ ಪ್ರಶಸ್ತಿ

Published:
Updated:
Prajavani

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಪ್ರತಿಷ್ಠಿತ ‘ಆರ್ಡರ್‌ ಆಫ್‌ ಸೇಂಟ್‌ ಆಂಡ್ರ್ಯೂ ದ ಅಪೋಸ್ಲ್’ ಪ್ರಶಸ್ತಿಗೆ ಭಾಜನರಾಗಿದ್ದಾರೆ. 

ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಕೊಡುಗೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. 

ಭಾರತ ಮತ್ತು ರಷ್ಯಾದ ಸಂಬಂಧ ಬಲಪಡಿಸಲು ಕೈಗೊಂಡ ಕ್ರಮಗಳು ಮತ್ತು ಸಹಭಾಗಿತ್ವಕ್ಕೆ ಉತ್ತೇಜನ ನೀಡಿರುವುದನ್ನು ಪರಿಗಣಿಸಿ ಪ್ರಧಾನಿ ಮೋದಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ರಷ್ಯಾದ ರಾಯಭಾರ ಕಚೇರಿ ಮೂಲಗಳು ತಿಳಿಸಿವೆ. 

‘ಆರ್ಡರ್‌ ಆಫ್‌ ಸೇಂಟ್‌ ಆಂಡ್ರ್ಯೂ ದ ಅಪೋಸ್ಲ್’ ಪ್ರಶಸ್ತಿಯನ್ನು ಮುತ್ಸದ್ದಿಗಳಿಗೆ, ಸಾರ್ವಜನಿಕ ರಂಗದಲ್ಲಿರುವ ವ್ಯಕ್ತಿಗಳಿಗೆ ಮತ್ತು ವಿಜ್ಞಾನ, ಸಂಸ್ಕೃತಿ ಮತ್ತು ಕಲಾ ರಂಗದಲ್ಲಿ ವಿಶೇಷ ಸೇವೆ ಸಲ್ಲಿಸಿ ರಷ್ಯಾದ ಪ್ರಗತಿ ಮತ್ತು ವೈಭವವನ್ನು ಉತ್ತೇಜಿಸುವವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಜತೆಗೆ, ಅತ್ಯುತ್ತಮ ಸೇವೆ ಸಲ್ಲಿಸಿದ ಯಾವುದೇ ರಾಷ್ಟ್ರದ ನಾಯಕರಿಗೂ ನೀಡಲು ಅವಕಾಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 11

  Happy
 • 5

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !