ಶಬರಿಮಲೆ: ರಕ್ಷಣೆ ಕೋರಿ ‘ಸುಪ್ರೀಂ’ಗೆ ಅರ್ಜಿ ಸಲ್ಲಿಸಿದ ಕನಕದುರ್ಗಾ, ಬಿಂದು

7

ಶಬರಿಮಲೆ: ರಕ್ಷಣೆ ಕೋರಿ ‘ಸುಪ್ರೀಂ’ಗೆ ಅರ್ಜಿ ಸಲ್ಲಿಸಿದ ಕನಕದುರ್ಗಾ, ಬಿಂದು

Published:
Updated:

ನವದೆಹಲಿ: ಶಬರಿಮಲೆ ದೇಗುಲ ಪ್ರವೇಶಿಸಿದ ಕನಕದುರ್ಗಾ ಮತ್ತು ಬಿಂದು ಅವರು ತಮಗೆ ದಿನದ 24 ಗಂಟೆಯೂ ರಕ್ಷಣೆ ಕೊಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಪೀಠವು ಶುಕ್ರವಾರ ಈ ಅರ್ಜಿಯ ವಿಚಾರಣೆ ನಡೆಸಲಿದೆ. 

ಕನಕದುರ್ಗಾ ಮೇಲೆ ಅವರ ಅತ್ತೆಯೇ ಹಲ್ಲೆ ನಡೆಸಿದ್ದಾರೆ ಎಂದು ಇತ್ತೀಚೆಗೆ ಆರೋಪಿಸಲಾಗಿತ್ತು. ಹಾಗಾಗಿ ಕನಕದುರ್ಗಾ ಮತ್ತು ಬಿಂದು ಅವರು ರಕ್ಷಣೆಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. 

ಎಲ್ಲ ವಯೋಮಾನದ ಮಹಿಳೆಯರು ಯಾವುದೇ ತೊಡಕು ಇಲ್ಲದೆ ದೇಗುಲ ಪ್ರವೇಶಿಸಲು ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಎಲ್ಲ ಪ್ರಾಧಿಕಾರಗಳಿಗೆ ಸೂಚಿಸಬೇಕು. ದೇಗುಲ ಪ್ರವೇಶಿಸಲು ಬಯಸುವ ಮಹಿಳೆಯರಿಗೆ ಪೊಲೀಸ್‌ ರಕ್ಷಣೆ ಒದಗಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. 

ಮಹಿಳೆಯರು ಪ್ರವೇಶಿಸಿದ ಬಳಿಕ ದೇಗುಲವನ್ನು ಶುದ್ಧೀಕರಿಸದಂತೆ ಆದೇಶ ನೀಡಬೇಕು. ಇಂತಹ ಶುದ್ಧೀಕರಣವು ಮಾನವ ಘನತೆಯನ್ನು ಕುಗ್ಗಿಸುತ್ತದೆ ಮತ್ತು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಆದೇಶ ನೀಡಬೇಕು ಎಂದು ಈ ಇಬ್ಬರು ಮಹಿಳೆಯರು ಕೇಳಿದ್ದಾರೆ. 

ಬರಹ ಇಷ್ಟವಾಯಿತೆ?

 • 4

  Happy
 • 2

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !