ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಬರಿಮಲೆ ತೀರ್ಪು ಪುನರ್‌ ಪರಿಶೀಲನೆ ನ.13ರಂದು

Last Updated 23 ಅಕ್ಟೋಬರ್ 2018, 18:40 IST
ಅಕ್ಷರ ಗಾತ್ರ

ನವದೆಹಲಿ: ಶಬರಿಮಲೆ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೆ ಪ್ರವೇಶ ನೀಡಿದ ಸಂವಿಧಾನ ಪೀಠದ ತೀರ್ಪು ಪ್ರಶ್ನಿಸಿ ಸಲ್ಲಿಸಲಾದ ಪುನರ್‌ ಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನವೆಂಬರ್‌ 13ರಂದು ಕೈಗೆತ್ತಿಕೊಳ್ಳಲಿದೆ.

ರಾಷ್ಟ್ರೀಯ ಅಯ್ಯಪ್ಪ ಭಕ್ತರ ಸಂಘ ಸಲ್ಲಿಸಿದ್ದ ಅರ್ಜಿಯನ್ನು ಶೀಘ್ರ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ವಕೀಲ ಮ್ಯಾಥ್ಯೂ ನೆಡುಂಪಾರ ಸೋಮವಾರ ಮನವಿ ಮಾಡಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ಮತ್ತು ನ್ಯಾಯಮೂರ್ತಿ ಎಸ್‌.ಕೆ. ಕೌಲ್‌, ಎಲ್ಲ 19 ಪುನರ್‌ ಪರಿಶೀಲನಾ ಅರ್ಜಿಗಳನ್ನೂ ಒಟ್ಟಿಗೆ ವಿಚಾರಣೆ ನಡೆಸಲಾಗುವುದು ಎಂದರು.

ಶತಮಾನಗಳಿಂದ ಮಹಿಳೆಯರ ದೇಗುಲ ಪ್ರವೇಶಕ್ಕೆ ಇದ್ದ ವಯೋಮಿತಿ ನಿರ್ಬಂಧವನ್ನು ರದ್ದುಗೊಳಿಸಿದ್ದು ಒಪ್ಪಲಾಗದ ಅಸಂಬದ್ಧ ನಿರ್ಧಾರ ಎಂದು ರಾಷ್ಟ್ರೀಯ ಅಯ್ಯಪ್ಪ ಭಕ್ತರ ಸಂಘ ವಾದಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT