ಭಾನುವಾರ, ಸೆಪ್ಟೆಂಬರ್ 22, 2019
23 °C

ಕೋರ್ಟ್‌ಗೆ ಮಾಜಿ ಯೋಧ

Published:
Updated:

ನವದೆಹಲಿ: ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಲ್ಲಿಸಿದ್ದ ತಮ್ಮ ನಾಮಪತ್ರ ತಿರಸ್ಕರಿಸಿದ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ, ವಜಾಗೊಂಡಿರುವ ಬಿಎಸ್‌ಎಫ್‌ ಯೋಧ ತೇಜ್‌ ಬಹದ್ದೂರ್‌ ಯಾದವ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಲು ಅವರು ಬಯಸಿದ್ದರು.

ಯೋಧರಿಗೆ ಪೂರೈಸುವ ಆಹಾರದ ಗುಣಮಟ್ಟ ಕುರಿತು ಆನ್‌ಲೈನ್‌ನಲ್ಲಿ ವಿಡಿಯೊ ಅಪ್‌ಲೋಡ್‌ ಮಾಡಿದ್ದಕ್ಕಾಗಿ ಯಾದವ್‌ರನ್ನು ಸೇನೆ 2017ರಲ್ಲಿ ಸೇವೆಯಿಂದ ವಜಾಗೊಳಿಸಿತ್ತು.

ನಾಮಪತ್ರ ತಿರಸ್ಕರಿಸುವ ಆಯೋಗದ ಕ್ರಮ ಅಸಮರ್ಥನೀಯ ಮತ್ತು ತಾರತಮ್ಯದಿಂದ ಕೂಡಿದೆ ಎಂದು ಯಾದವ್‌ ಅವರು ತಮ್ಮ ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ. ಕ್ಷೇತ್ರದಲ್ಲಿ ಪ್ರಧಾನಿ ವಿರುದ್ಧ ಮೊದಲಿಗೆ ಶಾಲಿನಿ ಯಾದವ್ ಅವರನ್ನು ಕಣಕ್ಕಿಳಿಸಿದ್ದ ಸಮಾಜವಾದಿ ಪಕ್ಷ ಬಳಿಕ ಯಾದವ್‌ ಅವರನ್ನು ತನ್ನ ಅಭ್ಯರ್ಥಿಯಾಗಿ ಘೋಷಿಸಿತ್ತು.

Post Comments (+)