ಗಣರಾಜ್ಯೋತ್ಸವ–2019: ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಾಫೊಸಾ ಮುಖ್ಯ ಅತಿಥಿ

7

ಗಣರಾಜ್ಯೋತ್ಸವ–2019: ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಾಫೊಸಾ ಮುಖ್ಯ ಅತಿಥಿ

Published:
Updated:

ನವದೆಹಲಿ: ಮುಂದಿನ ವರ್ಷದ ಗಣರಾಜ್ಯೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಾಫೊಸಾ ಭಾಗವಹಿಸಲಿದ್ದಾರೆ ಎಂದು ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಬಿಡುವಿಲ್ಲದ ವೇಳಾಪಟ್ಟಿಯ ಕಾರಣ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಕೇಂದ್ರ ಸರ್ಕಾರದ ಆಹ್ವಾನವನ್ನು ನಿರಾಕರಿಸಿದ್ದರು. ಇದೀಗ ರಾಮಾಫೊಸಾ ಆಹ್ವಾನ ಸ್ವೀಕರಿಸಿದ್ದಾರೆ.

ಮಹಾತ್ಮ ಗಾಂಧಿ ಅನುಯಾಯಿಯಾಗಿರುವ ರಾಮಾಫೊಸಾ ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಗಾದಿಗೇರಿದವರು. ಅದಕ್ಕೂ ಮೊದಲು ಉದ್ಯಮಿ, ವರ್ಣಭೇದ ನೀತಿ ವಿರೋಧಿ ಕಾರ್ಯಕರ್ತ ಹಾಗೂ ಕಾರ್ಮಿಕ ಸಂಘದ ನಾಯಕರಾಗಿ ಗುರುತಿಸಿಕೊಂಡಿದ್ದರು. 2014–2018ರ ಅವಧಿಯಲ್ಲಿ ತಮ್ಮ ದೇಶದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ದಕ್ಷಿಣ ಆಫ್ರಿಕಾ ಬ್ರಿಕ್ಸ್‌ ಸದಸ್ಯ ರಾಷ್ಟ್ರವಾಗಿದ್ದು, ಈ ವರ್ಷದ ಜೂನ್‌ ತಿಂಗಳಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ರಾಮಾಫೊಸಾ ಅವರನ್ನು ಭೇಟಿ ಮಾಡಿದ್ದರು.

ಮಹಾತ್ಮ ಗಾಂಧಿ ಅವರ 150ನೇ ಜನ್ಮ ದಿನಾಚರಣೆ ಸಮಾರಂಭಕ್ಕೂ ರಾಮಾಫೊಸಾ ಅವರಿಗೆ ಆಹ್ವಾನ ನೀಡುವ ಯೋಜನೆ ಸರ್ಕಾರದ ಮುಂದಿದೆ.

ಬರಹ ಇಷ್ಟವಾಯಿತೆ?

 • 14

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !