ಸೋಮವಾರ, ಡಿಸೆಂಬರ್ 16, 2019
17 °C

ಸೈನಿಕ ಶಾಲೆ: ಬಾಲಕಿಯರಿಗೂ ಪ್ರವೇಶ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸೈನಿಕ ಶಾಲೆಗಳಲ್ಲಿ 2021–22ನೇ ಶೈಕ್ಷಣಿಕ ಸಾಲಿನಿಂದ ಬಾಲಕಿಯರಿಗೂ ಪ್ರವೇಶ ದೊರೆಯಲಿದೆ. ಈ ಕುರಿತ ಪ್ರಸ್ತಾವಕ್ಕೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಒಪ್ಪಿಗೆ ಸೂಚಿಸಿದ್ದಾರೆ. 

ಎರಡು ವರ್ಷಗಳ ಹಿಂದೆ ಮಿಜೋರಾಂನ ಛಿಂಗ್‌ಛಿಪ್‌ ಸೈನಿಕ ಶಾಲೆಯಲ್ಲಿ ರಕ್ಷಣಾ ಸಚಿವಾಲಯವು ಪ್ರಾಯೋಗಿಕವಾಗಿ ಬಾಲಕಿಯರಿಗೆ ಪ್ರವೇಶ ಕಲ್ಪಿಸಿತ್ತು. ಈ ಶಾಲೆಯಲ್ಲಿ ಕೈಗೊಂಡ ಯೋಜನೆಯು ಯಶಸ್ವಿಯಾಗಿದ್ದರಿಂದ ದೇಶದಲ್ಲಿರುವ ಉಳಿದ ಸೈನಿಕ ಶಾಲೆಗಳಲ್ಲಿಯೂ ಪ್ರವೇಶ ಕಲ್ಪಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ಲಿಂಗ ಸಮಾನತೆ ಸಾಧಿಸುವುದು ಮತ್ತು ಸೇನಾ ಪಡೆಗಳಲ್ಲಿ ಮಹಿಳೆಯರಿಗೆ ಆದ್ಯತೆ ನೀಡುವ ಉದ್ದೇಶದಿಂದ ಈ ಕ್ರಮಕೈಗೊಳ್ಳಲಾಗಿದೆ. ಬಾಲಕಿಯರ ಅಗತ್ಯಕ್ಕೆ ತಕ್ಕಂತೆ ಮಹಿಳಾ ಸಿಬ್ಬಂದಿಯನ್ನು ನೇಮಿಸಿಕೊಳ್ಳಬೇಕು ಮತ್ತು ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ರಕ್ಷಣಾ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು