ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶರಣಾಗಲು ಕಾಲಾವಕಾಶ ಕೋರಿದ್ದ ಸಜ್ಜನ್‌ ಅರ್ಜಿ ತಿರಸ್ಕರಿಸಿದ ಕೋರ್ಟ್‌

Last Updated 21 ಡಿಸೆಂಬರ್ 2018, 7:04 IST
ಅಕ್ಷರ ಗಾತ್ರ

ನವದೆಹಲಿ:1984ರ ಸಿಖ್‌ ವಿರೋಧಿ ದಂಗೆಗೆ ಸಂಬಂಧಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಜ್ಜನ್‌ ಕುಮಾರ್ ಶರಣಾಗಲು ಒಂದು ತಿಂಗಳು ಹೆಚ್ಚುವರಿ ಕಾಲಾವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ.

ಡಿಸೆಂಬರ್‌ 31ರೊಳಗೆ ಶರಣಾಗುವಂತೆ ಅವರಿಗೆ ನ್ಯಾಯಾಲಯ ಸೂಚಿಸಿತ್ತು.ಶರಣಾಗಲು ನೀಡಿರುವ ಅವಧಿಯನ್ನು 2019ರ ಜನವರಿ 31ರವರೆಗೆ ವಿಸ್ತರಿಸಬೇಕು ಎಂದು ಸಜ್ಜನ್ ಮನವಿ ಮಾಡಿದ್ದರು.

ತಮಗೆ ಮೂವರು ಮಕ್ಕಳು ಮತ್ತು 8 ಮಂದಿ ಮೊಮ್ಮಕ್ಕಳು ಇದ್ದಾರೆ. ಆಸ್ತಿ ವಿಚಾರವನ್ನು ಇತ್ಯರ್ಥ್ಯಗೊಳಿಸಿಕೊಳ್ಳ ಬೇಕಿದ್ದು, ಇದಕ್ಕೆ ಕಾಲಾವಕಾಶದ ಅಗತ್ಯವಿದೆ ಎಂದು ಸಜ್ಜನ್‌ ಕೋರಿದ್ದರು.

ತೀರ್ಪಿನ ನಂತರ ಮಾತನಾಡಿದ ಸಜ್ಜನ್‌ ಪರ ವಕೀಲ ಕುಮಾರ್‌, ‘ದೆಹಲಿ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಇನ್ನಷ್ಟು ಸಮಯಾವಕಾಶ ಬೇಕಿದೆ‘ ಎಂದು ಹೇಳಿದರು.

ಸಿಖ್‌ ವಿರೋಧಿ ದಂಗೆಗೆ ಸಂಬಂಧಿಸಿ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್, ವಿಚಾರಣಾ ನ್ಯಾಯಾಲಯ ನೀಡಿದ್ದ ತೀರ್ಪನ್ನು ತಳ್ಳಿಹಾಕಿ ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.ಅಲ್ಲದೆ, ನಗರ ಬಿಟ್ಟು ಹೊರಗೆ ಹೋಗದಂತೆ ಸೂಚಿಸಿತ್ತು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT