ಸೋಮವಾರ, ಜೂನ್ 1, 2020
27 °C

ಕೊರೊನಾ | ಕೃಷಿ ಉತ್ಪನ್ನಗಳ ಮಾರಾಟ, ಖರೀದಿಗೆ ಕರ್ಫ್ಯೂ ಇಲ್ಲ: ಕೇಂದ್ರ ಕೃಷಿ ಸಚಿವ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕೃಷಿ ಮತ್ತು ಅದಕ್ಕೆ ಸಂಬಂಧಿಸಿದಂತೆ ಚಟುವಟಿಕೆ ಯಂತ್ರೋಪಕರಣಗಳ ಸಾಗಾಟಕ್ಕೆ ಕೊರೊನಾ ಲಾಕ್‌‌ಡೌನ್ ಅನ್ವಯಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಕೃಷಿ ಚಟುವಟಿಕೆ ಕೈಗೊಳ್ಳುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ತೊಮರ್ ಹೇಳಿದ್ದಾರೆ. 

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಕೃಷಿ ಪ್ರಧಾನ ದೇಶ, ಆದ್ದರಿಂದ ಕೃಷಿಗೆ ಸಂಬಂಧಿಸಿದ ವಸ್ತುಗಳ ಮಾರಾಟ, ವಿತರಣೆಗೆ ಕೊರೊನಾ ಲಾಕ್ ಡೌನ್ ಅನ್ವಯಿಸುವುದಿಲ್ಲ ಎಂದು ಹೇಳಿದ್ದಾರೆ.

ಬೀಜ, ರಾಸಾಯನಿಕ ಗೊಬ್ಬರ, ಕ್ರಿಮಿನಾಶಕಗಳ ಮಾರಾಟ, ಕೃಷಿ ಉತ್ಪನ್ನಗಳ ಮಾರಾಟ ಮತ್ತು ಸಾಗಾಣಿಕೆ ಇವುಗಳಿಗೆ ಕರ್ಫ್ಯೂ ಅನ್ವಯಿಸುವುದಿಲ್ಲ. ಆದರೆ, ಮಾರಾಟ ಮಾಡುವಾಗ ಮತ್ತು ಚಟುವಟಿಕೆ ನಡೆಯುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಿ ಹೇಳಿರುವುದಾಗಿ ತೊಮರ್ ತಿಳಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು