ಶುಕ್ರವಾರ, ಏಪ್ರಿಲ್ 16, 2021
30 °C

ಎಸ್‌ಪಿ ಮುಖಂಡನ ಮೇಲೆ ಗುಂಡಿನ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನೋಯ್ಡಾ: ಗ್ರೇಟರ್‌ ನೋಯ್ಡಾದಲ್ಲಿ ಸಮಾಜವಾದಿ ಪಕ್ಷದ ಮುಖಂಡರೊಬ್ಬರ ಮೇಲೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ.

ಸಮಾಜವಾದಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬ್ರಜ್‌ಪಾಲ್‌ ರಾಥಿ ಎಂಬುವವರ ಮೇಲೆ ದಾಳಿ ನಡೆದಿದ್ದು, ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಕ್ರವಾರ ರಾತ್ರಿ ಬ್ರಜ್‌ಪಾಲ್‌ ಅವರು ಗೆಳೆಯನ ಜೊತೆ ಕಾರಿನಲ್ಲಿ ಮನೆಗೆ ಮರಳುತ್ತಿದ್ದಾಗ ದುಷ್ಕರ್ಮಿ ಗುಂಡು ಹಾರಿಸಿದ್ದಾನೆ, ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗೌತಮ ಬುದ್ಧ ನಗರದಲ್ಲಿ ಸ್ಥಳೀಯ ಪಕ್ಷದ ಮುಖಂಡನೊಬ್ಬನ ಹತ್ಯೆ ನಡೆದು 12 ಗಂಟೆಯೊಳಗೆ ಈ ದಾಳಿ ನಡೆದಿದೆ ಎಂದಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು