ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಸರ ಸೂಕ್ಷ್ಮ ವಲಯ ಘೋಷಣೆಗೆ ಕೇಂದ್ರ ಸರ್ಕಾರಕ್ಕೆ ‘ಸುಪ್ರೀಂ’ ಸೂಚನೆ

ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಸೂಚನೆ
Last Updated 11 ಡಿಸೆಂಬರ್ 2018, 18:16 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದ ಮೂರು ವನ್ಯಜೀವಿ ಧಾಮಗಳು ಸೇರಿದಂತೆ ದೇಶದ 21 ರಾಷ್ಟ್ರೀಯ ಉದ್ಯಾನಗಳು ಹಾಗೂ ವನ್ಯಜೀವಿ ಧಾಮಗಳ ಸುತ್ತಲಿನ 10 ಕಿ.ಮೀ. ವ್ಯಾಪ್ತಿ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸುವಂತೆ ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಮಂಗಳವಾರ ಸೂಚನೆ ನೀಡಿದೆ.

‘ಈ ವಲಯಗಳಲ್ಲಿ ಯಾವುದೇ ವಾಣಿಜ್ಯಿಕ ಮತ್ತು ಇತರ ಚಟುವಟಿಕೆಗಳನ್ನು ನಿರ್ಬಂಧಿಸಬೇಕು ಹಾಗೂ ವಲಯಗಳ ನಿಯಂತ್ರಣ ಮಾಡಬೇಕು’ ಎಂದು ನ್ಯಾಯಮೂರ್ತಿಗಳಾದ ಮದನ್‌ ಬಿ.ಲೋಕೂರ್‌, ದೀಪಕ್‌ ಗುಪ್ತಾ ಹಾಗೂ ಹೇಮಂತ್‌ ಗುಪ್ತಾ ಅವರನ್ನು ಒಳಗೊಂಡ ನ್ಯಾಯಪೀಠ ಸೂಚಿಸಿದೆ.

‘ಪರಿಸರ ಸೂಕ್ಷ್ಮ ವಲಯಗಳ ಘೋಷಣೆಗೆ ಸಂಬಂಧಿಸಿದಂತೆ 2006ರ ಡಿಸೆಂಬರ್‌ನಲ್ಲಿಯೇ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಆದರೂ, ಹಲವಾರು ರಾಜ್ಯಗಳು ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ’ ಎಂದು ಈ ವಿಷಯದಲ್ಲಿ ಸುಪ್ರೀಂಕೋರ್ಟ್‌ಗೆ ನೆರವು ನೀಡುತ್ತಿರುವ ವಕೀಲ ಎ.ಡಿ.ಎನ್‌.ರಾವ್‌ ಅವರು ವಾದವನ್ನು ನ್ಯಾಯಪೀಠ ಗಂಭೀರವಾಗಿ ಪರಿ ಗಣಿಸಿದೆ.

‘ಶೀಘ್ರವೇ ಈ ಘೋಷಣೆ ಮಾಡು ವಂತೆಯೂ’ ನ್ಯಾಯಪೀಠ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ಆದೇಶಿಸಿದೆ.

ಕರ್ನಾಟಕದಲ್ಲಿ ಜೋಗಿಮಟ್ಟಿ (ಚಿತ್ರದುರ್ಗ), ತಿಮ್ಲಾಪುರ (ತುಮಕೂರು) ಹಾಗೂ ಯಡಹಳ್ಳಿ ಜಿಂಕೆ (ಬಾಗಲಕೋಟೆ ಜಿಲ್ಲೆ) ಧಾಮಗಳು ಈ ಪಟ್ಟಿಯಲ್ಲಿ ಸೇರಿವೆ. ಆದರೆ, ಇವುಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾವುದೇ ಪ್ರಸ್ತಾವವನ್ನು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ಕಳುಹಿಸಿಲ್ಲ. ಗಣಿಗಾರಿಕೆ, ಸಾ ಮಿಲ್‌ ಸ್ಥಾಪನೆ, ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ಕೈಗಾರಿಕೆಗಳನ್ನು ಆರಂಭಿಸಲು, ಅರಣ್ಯದಲ್ಲಿ ಸಿಗುವ ಕಟ್ಟಿಗೆಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದು, ಬೃಹತ್‌ ಜಲ ವಿದ್ಯುತ್‌ ಉತ್ಪಾದನಾ ಘಟಕಗಳನ್ನು ಪರಿಸರ ಸೂಕ್ಷ್ಮವಲಯದಲ್ಲಿ ಸ್ಥಾಪಿಸುವಂತಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT