ಶುಕ್ರವಾರ, ಫೆಬ್ರವರಿ 28, 2020
19 °C

ಉತ್ತರಾಖಂಡ: ರೈಲು ನಿಲ್ದಾಣಗಳಲ್ಲಿ ಉರ್ದು ಬದಲು ಸಂಸ್ಕೃತ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಡೆಹ್ರಾಡೂನ್: ‘ಉತ್ತರಾಖಂಡದ ರೈಲು ನಿಲ್ದಾಣಗಳಲ್ಲಿನ ನಾಮಫಲಕಗಳಲ್ಲಿ ಉರ್ದು ಭಾಷೆಯಲ್ಲಿರುವ ಹೆಸರುಗಳನ್ನು ಸಂಸ್ಕೃತಕ್ಕೆ ಬದಲಾಯಿಸಲಾಗುತ್ತದೆ’ ಎಂದು ಉತ್ತರ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ದೀಪಕ್ ಕುಮಾರ್ ತಿಳಿಸಿದ್ದಾರೆ.

ಸಂಸ್ಕೃತ ಉತ್ತರಾಖಂಡದ ಎರಡನೇ ಅಧಿಕೃತ ಭಾಷೆಯಾಗಿದೆ.

‘ರೈಲ್ವೆ ಇಲಾಖೆಯ ಮಾರ್ಗಸೂಚಿಯಲ್ಲಿರುವ ಅನುಸಾರ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಹಿಂದಿ ಹಾಗೂ ಇಂಗ್ಲಿಷ್ ನಂತರ ಆಯಾ ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನು ನಾಮಫಲಕಗಳಲ್ಲಿ ಬಳಸಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ನಿಯಮದ ಅನುಸಾರ 2010ರಲ್ಲಿ ಸಂಸ್ಕೃತವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಿದಾಗಲೇ ಈ ಕ್ರಮ ಕೈಗೊಳ್ಳಬೇಕಿತ್ತು’ ಎಂದು ಅವರು ಹೇಳಿದ್ದಾರೆ. ಈವರೆಗೆ ನಾಮಫಲಕಗಳಲ್ಲಿ ಹಿಂದಿ, ಇಂಗ್ಲಿಷ್ ಹಾಗೂ ಉರ್ದುವಿನಲ್ಲಿ ಬರೆಯಲಾಗುತ್ತಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು