ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೀವ್‌ಕುಮಾರ್‌ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಬಹುಕೋಟಿ ಶಾರದಾ ಚಿಟ್‌ಫಂಡ್‌ ಹಗರಣ
Last Updated 24 ಮೇ 2019, 20:19 IST
ಅಕ್ಷರ ಗಾತ್ರ

ನವದೆಹಲಿ: ಶಾರದಾ ಚಿಟ್‌ಫಂಡ್‌ ಹಗರಣಕ್ಕೆ ಸಂಬಂಧಿಸಿದಂತೆ ಈ ಮೊದಲು ನೀಡಿದ್ದ ಬಂಧನ ತಡೆ ಅವಧಿಯನ್ನು ವಿಸ್ತರಿಸುವಂತೆ ಕೋಲ್ಕತ್ತದ ಮಾಜಿ ಪೊಲೀಸ್‌ ಕಮಿಷನರ್‌ ರಾಜೀವ್‌ಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರುಣ್‌ಮಿಶ್ರಾ ನೇತೃತ್ವದ ನ್ಯಾಯಪೀಠ, ಕಾನೂನು ಪರಿಹಾರಕ್ಕಾಗಿ ಕೋಲ್ಕತ್ತ ಹೈಕೋರ್ಟ್‌ ಅಥವಾ ವಿಚಾರಣಾ ನ್ಯಾಯಾಲಯದ ಮೊರೆ ಹೋಗಬಹುದು ಎಂದು ರಾಜೀವ್‌ಕುಮಾರ್‌ ಅವರಿಗೆ ಹೇಳಿದೆ.

ರಾಜೀವ್‌ಕುಮಾರ್‌ ಅವರಿಗೆ ಮೇ 17ರಂದು ಏಳು ದಿನಗಳ ಕಾಲಾವಕಾಶ ನೀಡಲಾಗಿತ್ತು. ಆದರೆ, ಕೋಲ್ಕತ್ತ ನ್ಯಾಯಾಲಯದ ವಕೀಲರು ಸದ್ಯ ಮುಷ್ಕರದಲ್ಲಿ ತೊಡಗಿದ್ದು, ಈ ಅವಧಿಯನ್ನು ವಿಸ್ತರಿಸಬೇಕು ಎಂದು ರಾಜೀವ್‌ಕುಮಾರ್‌ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT