ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಾಜಿ ಯೋಧನ ಆಕ್ಷೇಪ ಪರಿಶೀಲಿಸಿ’

Last Updated 8 ಮೇ 2019, 19:37 IST
ಅಕ್ಷರ ಗಾತ್ರ

ನವದೆಹಲಿ: ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗಿಳಿಯಲು ಬಯಸಿದ್ದ ಮಾಜಿ ಯೋಧ ತೇಜ್‌ ಬಹದ್ದೂರ್‌ ಯಾದವ್‌ ಅವರ ಆಕ್ಷೇಪಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ ಬುಧವಾರ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.

ಸೇನೆಯಿಂದ ವಜಾಗೊಂಡಿದ್ದ ಯೋಧ ತೇಜ್‌ ಬಹದ್ದೂರ್‌ ಅವರು ಮೋದಿ ವಿರುದ್ಧ ಸ್ಪರ್ಧಿಸುವ ಉದ್ದೇಶದಿಂದ ವಾರಾಣಸಿ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ ಚುನಾವಣಾ ಆಯೋಗವು ಅವರ ನಾಮಪತ್ರವನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ ಮೊರೆಹೋಗಿದ್ದರು.

ಈ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಪೀಠವು, ತೇಜ್‌ ಬಹದ್ದೂರ್‌ ಅವರ ಆಕ್ಷೇಪಗಳಿಗೆ ಗುರುವಾರದೊಳಗೆ ಉತ್ತರ ನೀಡುವಂತೆ ಚುನಾವಣಾ ಆಯೋಗದ ಪರ ಹಾಜರಾಗಿದ್ದ ವಕೀಲರಿಗೆ ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT