ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಸುಪ್ರೀಂ ಕಳವಳ

7
ಪುನರ್ವಸತಿ ಕೇಂದ್ರಗಳಲ್ಲಿ ಪ್ರಕರಣ

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಸುಪ್ರೀಂ ಕಳವಳ

Published:
Updated:

ನವದೆಹಲಿ: ದೇಶದಾದ್ಯಂತ ಪುನರ್ವಸತಿ ಕೇಂದ್ರಗಳಲ್ಲಿ ವಾಸಿಸುತ್ತಿರುವ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಕುರಿತು ಸುಪ್ರೀಂ ಕೋರ್ಟ್ ಮಂಗಳವಾರ ಕಳವಳ ವ್ಯಕ್ತಪಡಿಸಿತು.

ಕೇಂದ್ರ ಸರ್ಕಾರ ಸಲ್ಲಿಸಿದ ಮಾಹಿತಿ ಪರಿಶೀಲಿಸಿದ ನ್ಯಾಯಮೂರ್ತಿ ಮದನ್‌ ಬಿ.ಲೋಕೂರ್ ನೇತೃತ್ವದ ನ್ಯಾಯಪೀಠ, ‘1,575 ಮಕ್ಕಳು ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಾಗಿದ್ದಾರೆ. ಇವರಲ್ಲಿ 286 ಮಂದಿ ಬಾಲಕರಾಗಿದ್ದಾರೆ. ಈ ಕುರಿತು ಏನು ಕ್ರಮ ಕೈಗೊಂಡಿದ್ದೀರಿ? ಅವರನ್ನು ಯಾವ ಪುನರ್ವಸತಿ ಕೇಂದ್ರಗಳಲ್ಲಿ ಇರಿಸಲಾಗಿದೆ?’ ಎಂದು ಪ್ರಶ್ನಿಸಿತು.

ಕೇಂದ್ರ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್‌ ಪಿಂಕಿ ಆನಂದ್‌, ‘ಕೇಂದ್ರ ಸರ್ಕಾರ ಕಳೆದ ವರ್ಷವೇ ಈ ಎಲ್ಲ ಪ್ರಕರಣಗಳ ಕುರಿತು ರಾಜ್ಯ ಸರ್ಕಾರಗಳಿಗೆ ಮಾಹಿತಿ ರವಾನಿಸಿದೆ. ಈ ನಿಟ್ಟಿನಲ್ಲಿ ನಿರ್ದೇಶನಗಳನ್ನು ಪಡೆದುಕೊಂಡು ಬಳಿಕ ನ್ಯಾಯಾಲಯಕ್ಕೆ ಮಾಹಿತಿ ನೀಡುತ್ತೇನೆ’ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !