ಮಂಗಳವಾರ, ಫೆಬ್ರವರಿ 25, 2020
19 °C

ಗಾಂಧಿಗೆ ಯಾಕೆ ಭಾರತರತ್ನ ನೀಡಿಲ್ಲ ಎಂದು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಮಹಾತ್ಮಗಾಂಧಿ ಅವರಿಗೆ ಭಾರತರತ್ನ ನೀಡದಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಎಲ್ಲ ಔಪಚಾರಿಕ ಬಿರುದುಗಳನ್ನು ಮೀರಿದ ಉನ್ನತ ಗೌರವವನ್ನು ರಾಷ್ಟ್ರಪಿತ ಮಹಾತ್ಮಗಾಂಧಿ ಹೊಂದಿದ್ದಾರೆ ಎಂದು ಹೇಳಿದೆ. ‌

ಮುಖ್ಯ ನ್ಯಾಯಮೂರ್ತಿ ಸಿ.ಎ.ಬೊಬಡೆ, ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ ಮತ್ತು ಸೂರ್ಯಕಾಂತ್‌ ಅವರಿದ್ದ ಪೀಠ, ‘ಗಾಂಧಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಸರ್ಕಾರಕ್ಕೆ ಕೋರ್ಟ್‌ ನಿರ್ದೇಶನ ನೀಡುವುದು ಸಮರ್ಥನೀಯವಲ್ಲ. ಪ್ರಶಸ್ತಿಗಿಂತಲೂ ಉನ್ನತ ಸ್ಥಾನದಲ್ಲಿ ಅವರನ್ನು ನಾಗರಿಕರು ಇರಿಸಿದ್ದಾರೆ’ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೆ, ‘ಅರ್ಜಿದಾರರ ಭಾವನೆಗೆ ಮನ್ನಣೆ ನೀಡಲಾಗುವುದು. ಈ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಬಹುದು’ ಎಂದು ಅರ್ಜಿದಾರರಿಗೆ ಸೂಚಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು