ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಲ್ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ಕೆಪಿಟಿಸಿಎಲ್‌ ಜ್ಯೇಷ್ಠತಾ ಪಟ್ಟಿ ಪರಿಷ್ಕರಣೆಗೆ ವಿರೋಧ:
Last Updated 19 ಫೆಬ್ರುವರಿ 2019, 19:39 IST
ಅಕ್ಷರ ಗಾತ್ರ

ನವದೆಹಲಿ: ಕೆಪಿಟಿಸಿಎಲ್‌ ಅಧಿಕಾರಿಗಳ ಜ್ಯೇಷ್ಠತಾ ಪಟ್ಟಿ ಪರಿಷ್ಕರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು 2017ರಲ್ಲಿ ಆದೇಶ ಹೊರಡಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

‘ಈ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸುವುದಕ್ಕೆ ಸಕಾರಣಗಳಿಲ್ಲ’ ಎಂದು ಮೇಲ್ಮನವಿ ವಜಾಗೊಳಿಸಿದ ನ್ಯಾಯಮೂರ್ತಿಗಳಾದ ಎಲ್‌.ನಾಗೇಶ್ವರರಾವ್‌ ಹಾಗೂ ಮೋಹನ್‌ ಶಾಂತನಗೌಡರ್‌ ಅವರಿದ್ದ ಪೀಠ ಅಭಿಪ್ರಾಯಪಟ್ಟಿತು.

2017ರ ಮೇ 17ರಿಂದ ಡಿಸೆಂಬರ್‌ 29ರವರೆಗೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು 2018ರ ಮಾರ್ಚ್‌ 19ರಂದು ರಾಜ್ಯ ಹೈಕೋರ್ಟ್‌ ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ಎಸ್.ಪಿ. ಸಕ್ಕರಿ ಮತ್ತಿತರರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಬಡ್ತಿಯಲ್ಲಿ ಮೀಸಲಾತಿ ಅನುಸರಿಸುವ ರಾಜ್ಯ ಸರ್ಕಾರದ ಕಾಯ್ದೆಯನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ 2017ರ ಫೆಬ್ರುವರಿ 9ರಂದು ಹೊರಡಿಸಿದ್ದ ಆದೇಶಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ ಜ್ಯೇಷ್ಠತಾ ಪಟ್ಟಿಯ ಪರಿಷ್ಕರಣೆಯ ಆದೇಶ ಜಾರಿ ಮಾಡಿತ್ತು.

‘ಮೀಸಲಾತಿ ಆಧಾರದಲ್ಲಿ ಬಡ್ತಿ ಪಡೆದ ಸರ್ಕಾರಿ ನೌಕರರಿಗೆ ತತ್ಪರಿಣಾಮ ಜ್ಯೇಷ್ಠತೆ ವಿಸ್ತರಿಸುವ’ ರಾಜ್ಯ ಸರ್ಕಾರದ ನೂತನ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಬಿ.ಕೆ. ಪವಿತ್ರ ಮತ್ತಿತರರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಯು.ಯು. ಲಲಿತ್‌ ಹಾಗೂ ಡಿ.ವೈ. ಚಂದ್ರಚೂಡ್‌ ನೇತೃತ್ವದ ಪೀಠ ನಡೆಸುತ್ತಿದೆ. ಇದೇ 26ರಂದು ಪ್ರಕರಣದ ಅಂತಿಮ ಹಂತದ ವಿಚಾರಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT