10ರಂದು ರಫೇಲ್‌ ಒಪ್ಪಂದ ವಿರುದ್ಧದ ಅರ್ಜಿ ವಿಚಾರಣೆಗೆ ‘ಸುಪ್ರೀಂ’ ಸಮ್ಮತಿ 

7

10ರಂದು ರಫೇಲ್‌ ಒಪ್ಪಂದ ವಿರುದ್ಧದ ಅರ್ಜಿ ವಿಚಾರಣೆಗೆ ‘ಸುಪ್ರೀಂ’ ಸಮ್ಮತಿ 

Published:
Updated:

ನವದೆಹಲಿ: ಭಾರತ ಮತ್ತು ಫ್ರಾನ್ಸ್‌ ನಡುವಿನ ರಫೇಲ್‌ ಒಪ್ಪಂದದ ಕುರಿತು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅ.10ರಂದು ನಡೆಸಲಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ಮತ್ತು ನ್ಯಾಯಮೂರ್ತಿಗಳಾದ ಎಸ್‌.ಕೆ. ಕೌಲ್‌, ಕೆ.ಎಂ.ಜೋಸೆಫ್‌ ಅವರನ್ನೊಳಗೊಂಡ ಪೀಠವು, ವಕೀಲ ವಿನೀತ್‌ ಧಂಡಾ ಅಲ್ಲಿಸಿರುವ ಪಿಐಎಲ್‌ ಅನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದೆ. 

ಯುಪಿಎ ಮತ್ತು ಎನ್‌ಡಿಎ ಸಮಯದಲ್ಲಿ ನಡೆದ ಒಪ್ಪಂದದ ವಿವರಗಳನ್ನು ಬಹಿರಂಗಪಡಿಸಲು ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ರಫೇಲ್‌ ಯುದ್ಧ ವಿಮಾನ ಖರೀದಿಸಲು ಡಸಾಲ್ಟ್‌ ಕಂಪೆನಿ ಜತೆಗೆ ಅನಿಲ್‌ ಅಂಬಾನಿ ಮಾಲೀಕತ್ವದ ರಿಲಯನ್ಸ್‌ ಡಿಫೆನ್ಸ್‌ ಕಂಪನಿ ನಡುವೆ ನಡೆದಿರುವ ಒಪ್ಪಂದದ ಮಾಹಿತಿಯನ್ನೂ ಬಹಿರಂಗಪಡಿಸಬೇಕು ಎಂದು ಕೋರಲಾಗಿದೆ.

ಫ್ರಾನ್ಸ್‌ ಜತೆಗಿನ ಫೈಟರ್‌ ಜೆಟ್‌ ವ್ಯವಹಾರಗಳ ಬಗ್ಗೆ ಅಸಮ್ಮತಿ ವ್ಯಕ್ತಪಡಿಸಿ ವಕೀಲ ಎಂ.ಎಲ್‌. ಶರ್ಮಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನೂ ಅಂದೇ ನ್ಯಾಯಾಲಯ ಕೈಗೆತ್ತಿಕೊಳ್ಳಲಿದೆ.

36 ರಫೇಲ್‌ ಫೈಟರ್‌ ಜೆಟ್‌ಗಳ ಖರೀದಿಯ ಎರಡು ಸರ್ಕಾರಗಳ ನಡುವಿನ ಒಪ್ಪಂದವನ್ನು ‘ಭ್ರಷ್ಟಾಚಾರದ ಫಲ’ ಎಂದು ಘೋಷಿಸಬೇಕು ಮತ್ತು ಸಂವಿಧಾನದ 253ನೇ ವಿಧಿಯ ಅಡಿಯಲ್ಲಿ ಅನುಮೋದಿಸಬಾದರು ಎಂದು ಶರ್ಮಾ ಅರ್ಜಿಯಲ್ಲಿ ಕೋರಿದ್ದಾರೆ.

‘ರಫೇಲ್‌ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ಕೇಂದ್ರ ಸರ್ಕಾರವು ದಿಟ್ಟ ನಿರ್ಧಾರ ಕೈಗೊಂಡಿದೆ. ರಫೇಲ್‌ ಯುದ್ಧ ವಿಮಾನ ಸೇರ್ಪಡೆಯಿಂದ ದೇಶದ ವಾಯು ಪಡೆಯ ಬಲ ತೀವ್ರವಾಗಿ ಏರಿಕೆಯಾಗಲಿದೆ ಎಂದು ವಾಯುಪಡೆ ಮುಖ್ಯಸ್ಥ ಬಿ.ಎಸ್‌. ಧನೋವಾ ಈಚೆಗೆ ಹೇಳಿದ್ದರು. ಫ್ರಾನ್ಸ್‌ನಿಂದ 36 ರಫೇಲ್‌ ವಿಮಾನ ಖರೀದಿ ವಿಚಾರದಲ್ಲಿ ಉಂಟಾಗಿರುವ ವಿವಾದದಿಂದಾಗಿ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. 

ರಫೇಲ್‌ ವಿಮಾನ ತಯಾರಿಸುವ ಫ್ರಾನ್ಸ್‌ನ ಡಾಸೋ ಏವಿಯೇಷನ್‌ನ ಭಾರತೀಯ ಪಾಲುದಾರ ಸಂಸ್ಥೆಯಾಗಿ ರಿಲಯನ್ಸ್‌ ಡಿಫೆನ್ಸ್‌ ಆಯ್ಕೆಯಲ್ಲಿ ಭಾರತ ಸರ್ಕಾರ ಅಥವಾ ವಾಯಪಡೆಗೆ ಯಾವುದೇ ಪಾತ್ರ ಇಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಅನಿಲ್‌ ಅಂಬಾನಿ ಅವರ ರಿಲಯನ್ಸ್‌ ಡಿಫೆನ್ಸ್‌ ಕಂಪನಿಯನ್ನು ಡಾಸೋ ಕಂಪನಿಯೇ ಆಯ್ಕೆ ಮಾಡಿಕೊಂಡಿದೆ ಎಂದು ಏರ್‌ ಚೀಫ್ ಮಾರ್ಷಲ್‌ ಧನೋವಾ ಹೇಳಿದ್ದರು.

₹59 ಸಾವಿರ ಕೋಟಿಯ ಈ ಖರೀದಿ ಒಪ್ಪಂದದಲ್ಲಿ ದೇಶೀ ಪಾಲುದಾರ ಕಂಪನಿಯಾಗಿ ಸರ್ಕಾರಿ ಸ್ವಾಮ್ಯದ ಎಚ್‌ಎಎಲ್‌ ಬದಲಿಗೆ ಅನಿಲ್‌ ಅಂಬಾನಿ ಮಾಲೀಕತ್ವದ ರಿಲಯನ್ಸ್‌ ಡಿಫೆನ್ಸ್ ಅನ್ನು ಆಯ್ಕೆ ಮಾಡಿರುವುದರಲ್ಲಿ ಅಕ್ರಮ ನಡೆದಿದೆ ಎಂದು ವಿರೋಧ ಪಕ್ಷ ಕಾಂಗ್ರೆಸ್‌ ಆರೋಪಿಸುತ್ತಿದೆ. 

ಬರಹ ಇಷ್ಟವಾಯಿತೆ?

 • 11

  Happy
 • 0

  Amused
 • 0

  Sad
 • 1

  Frustrated
 • 2

  Angry

Comments:

0 comments

Write the first review for this !