ಭಾನುವಾರ, ಮೇ 22, 2022
21 °C
ರಫೇಲ್‌ ಯುದ್ಧ ವಿಮಾನ ಖರೀದಿ ಒಪ್ಪಂದದ ಹಗರಣ

ರಫೇಲ್‌: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ಇದೇ 10ಕ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ರಫೇಲ್‌ ಯುದ್ಧ ವಿಮಾನ ಖರೀದಿ ಒಪ್ಪಂದ ಹಗರಣದ ತೀರ್ಪಿನ ಕುರಿತು ಸಲ್ಲಿಸಲಾಗಿರುವ ಮರುಪರಿಶೀಲನಾ ಅರ್ಜಿಗಳು ಮತ್ತು ರಾಹುಲ್‌ ಗಾಂಧಿ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಯನ್ನು ಮೇ 10 ರಂದು ಒಟ್ಟಾಗಿ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ.

ರಫೇಲ್‌ ಕುರಿತು 2018ರ ಡಿಸೆಂಬರ್‌ 14 ರಂದು ನೀಡಿದ್ದ ತೀರ್ಪಿನ ಮರುಪರಿಶೀಲನಾ ಅರ್ಜಿಗಳನ್ನು ಮೇ 10 ರಂದು ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ವಿಶೇಷ ಪೀಠ ಹೇಳಿದೆ.

ರಾಹುಲ್‌ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿ ಮತ್ತು ಮರುಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಒಟ್ಟಿಗೆ ನಡೆಸಲಾಗುವುದು ಎಂದು ಈ ಹಿಂದೆಯೇ ಹೇಳಿದ್ದರೂ ಪ್ರತ್ಯೇಕವಾಗಿ ವಿವಿಧ ದಿನಾಂಕಗಳನ್ನು ಈ ಅರ್ಜಿಗಳ ವಿಚಾರಣೆಗೆ ಪಟ್ಟಿ ಮಾಡಿರುವುದಕ್ಕೆ ಪೀಠದಲ್ಲಿದ್ದ ನ್ಯಾಯಮೂರ್ತಿಗಳಾದ ಎಸ್‌.ಕೆ.ಕೌಲ್‌ ಮತ್ತು ಕೆ.ಎಂ.ಜೋಸೆಫ್‌ ಅವರು ಆಶ್ಚರ್ಯ ವ್ಯಕ್ತಪಡಿಸಿದರು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು