ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸೀದಿಯಲ್ಲಿ ಮಹಿಳೆಯರ ಪ್ರಾರ್ಥನೆ: ಕೇಂದ್ರಕ್ಕೆ ‘ಸುಪ್ರೀಂ’ ನೋಟಿಸ್‌

Last Updated 16 ಏಪ್ರಿಲ್ 2019, 18:35 IST
ಅಕ್ಷರ ಗಾತ್ರ

ನವದೆಹಲಿ: ಪ್ರಾರ್ಥನೆ ಸಲ್ಲಿಸುವ ಸಂಬಂಧ ಮಸೀದಿಗಳಲ್ಲಿ ತಮಗೆ ಪ್ರವೇಶಿಸಲು ಅನುಮತಿ ನೀಡಬೇಕು ಎಂದು ಕೋರಿ ಮುಸ್ಲಿಂ ಮಹಿಳೆಯರು ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಸಮ್ಮತಿಸಿರುವ ಸುಪ್ರೀಂ ಕೋರ್ಟ್‌, ಕೇಂದ್ರ ಸರ್ಕಾರಕ್ಕೆ ಮಂಗಳವಾರ ನೋಟಿಸ್‌ ನೀಡಿದೆ.

‘ಶಬರಿಮಲೆ ದೇವಸ್ಥಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ತೀರ್ಪು ನೀಡಿರುವ ಏಕೈಕ ಕಾರಣದಿಂದಾಗಿ ಈ ಅರ್ಜಿಯ ವಿಚಾರಣೆ ನಡೆಸಲಿದ್ದೇವೆ’ ಎಂದು ನ್ಯಾಯಮೂರ್ತಿ ಎಸ್‌.ಎ.ಬೋಬ್ಡೆ ನೇತೃತ್ವದ ನ್ಯಾಯಪೀಠ ಅರ್ಜಿದಾರರ ಪರ ವಕೀಲರಿಗೆ ಹೇಳಿದೆ.

ಎಲ್ಲ ವಯೋಮಾನದ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿ, ಆಗ ಮುಖ್ಯ ನ್ಯಾಯಮೂರ್ತಿಯಾಗಿದ್ದ ದೀಪಕ್‌ ಮಿಶ್ರಾ ನೇತೃತ್ವದ ಸಾಂವಿಧಾನಿಕ ಪೀಠ ತೀರ್ಪು ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT