ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದಲ್ಲಿ ಮಾಧ್ಯಮ ನಿರ್ಬಂಧ ಸಡಿಲಿಕೆ: ಕೇಂದ್ರಕ್ಕೆ ಸುಪ್ರೀಂ ನೋಟಿಸ್

370ನೇ ವಿಧಿ ರದ್ದತಿ ವಿಚಾರಣೆ ಐವರು ಸದಸ್ಯರ ಸಾಂವಿಧಾನಿಕ ಪೀಠಕ್ಕೆ * ಅಕ್ಟೋಬರ್ ಮೊದಲ ವಾರ ವಿಚಾರಣೆ
Last Updated 28 ಆಗಸ್ಟ್ 2019, 6:14 IST
ಅಕ್ಷರ ಗಾತ್ರ

ನವದೆಹಲಿ:ಜಮ್ಮು–ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವ370ನೇ ವಿಧಿ ರದ್ದತಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಎಲ್ಲ ಅರ್ಜಿಗಳನ್ನುಐವರು ಸದಸ್ಯರ ಸಾಂವಿಧಾನಿಕ ಪೀಠ ವಿಚಾರಣೆ ನಡೆಸಲಿದೆ. ಅಕ್ಟೋಬರ್ ಮೊದಲ ವಾರ ವಿಚಾರಣೆ ನಡೆಯಲಿದೆ ಎಂದು ಸುಪ್ರೀಂ ಕೋರ್ಟ್‌ ಬುಧವಾರ ಹೇಳಿದೆ.

ಜಮ್ಮು–ಕಾಶ್ಮೀರದಲ್ಲಿ ಮಾಧ್ಯಮಗಳ ಮೇಲಿನ ನಿರ್ಬಂಧ ಸಡಿಲಿಸಬೇಕು ಎಂದು ‘ಕಾಶ್ಮೀರ್‌ ಟೈಮ್ಸ್‌’ನ ಕಾರ್ಯನಿರ್ವಾಹಕ ಸಂಪಾದಕಿ ಅನುರಾಧಾ ಭಸೀನ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಕೇಂದ್ರಕ್ಕೆ ನೋಟಿಸ್ ನೀಡಿದೆ. ಅಂತರ್ಜಾಲ, ಸ್ಥಿರ ದೂರವಾಣಿ ಮತ್ತು ಇತರ ಸಂವಹನ ಸಾಧನಗಳ ಮೇಲಿನ ನಿರ್ಬಂಧ ಸಡಿಲಿಸುವ ವಿಚಾರವಾಗಿ 7 ದಿನಗಳ ಒಳಗೆ ವಿಸ್ತೃತ ಪ್ರತಿಕ್ರಿಯೆ ನೀಡುವಂತೆ ಸರ್ಕಾರಕ್ಕೆ ಸೂಚಿಸಿದೆ.

ಜಮ್ಮು–ಕಾಶ್ಮೀರಕ್ಕೆ ಉಸ್ತುವಾರಿಯೊಬ್ಬರನ್ನು ನೇಮಕ ಮಾಡುವ ಕೇಂದ್ರ ಸರ್ಕಾರದ ಮನವಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT