ನಿರ್ಲಕ್ಷ್ಯದ ಚಾಲನೆಗೆ ವಿಮೆ ನಿರಾಕರಿಸುವಂತಿಲ್ಲ

7
ವಿಮಾ ಕಂಪನಿಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ನಿರ್ಲಕ್ಷ್ಯದ ಚಾಲನೆಗೆ ವಿಮೆ ನಿರಾಕರಿಸುವಂತಿಲ್ಲ

Published:
Updated:

ನವದೆಹಲಿ: ರಸ್ತೆ ಅಪಘಾತಗಳಲ್ಲಿ ಮೃತಪಟ್ಟ ಅಥವಾ ಗಾಯಗೊಂಡ ವಾಹನ ಚಾಲಕರ ನಿರ್ಲಕ್ಷ್ಯದ ಚಾಲನೆಯನ್ನು ಕಾರಣ ನೀಡಿ ವಿಮೆ ಹಣ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ವಿಮಾ ಕಂಪನಿಗಳಿಗೆ ತಾಕೀತು ಮಾಡಿದೆ.

ಎಂಟು ವರ್ಷಗಳ ಹಿಂದೆ ಬೆಳಗಾವಿ ಬಳಿ ನಡೆದ ಅಪಘಾತ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ಕಳೆದ ವರ್ಷ ನೀಡಿದ್ದ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ವಜಾಗೊಳಿಸಿದೆ. ಬೆಳಗಾವಿಯ ವಾಹನ ಅಪಘಾತ ಪರಿಹಾರ ನ್ಯಾಯಮಂಡಳಿ ನೀಡಿದ್ದ ಪರಿಹಾರ ಆದೇಶವನ್ನು ಎತ್ತಿ ಹಿಡಿದಿದೆ. 

ಪ್ರಕರಣದ ಹಿನ್ನೆಲೆ: 8 ವರ್ಷಗಳ ಹಿಂದೆ ಬೆಳಗಾವಿಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಶಾಜಿ ಶಿವಾಜಿ ದುಧಾಡೆ ಮೃತಪಟ್ಟು ಹಲವರು ಗಾಯಗೊಂಡಿದ್ದರು. ಶಾಜಿ ಕುಟುಂಬದವರು ಪರಿಹಾರ ಕೋರಿ ಬೆಳಗಾವಿಯ ವಾಹನ ಅಪಘಾತ ಪರಿಹಾರ ನ್ಯಾಯಮಂಡಳಿಯ ಮೊರೆ ಹೋಗಿದ್ದರು. ನ್ಯಾಯಮಂಡಳಿ ₹4,60,800 ಪರಿಹಾರ ನೀಡುವಂತೆ ವಿಮಾ ಕಂಪನಿಗೆ ಆದೇಶಿಸಿತ್ತು.

ಶಾಜಿಯ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ನಡೆದ ಕಾರಣ ಪರಿಹಾರ ನೀಡಲು ಯುನೈಟೆಡ್‌ ಇಂಡಿಯಾ ಇನ್ಸೂರನ್ಸ್ ಕಂಪನಿ ನಿರಾಕರಿಸಿತ್ತು. ನ್ಯಾಯಮಂಡಳಿಯ ಆದೇಶ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿತ್ತು. ಹೈಕೋರ್ಟ್ ವಿಮಾ ಕಂಪನಿಯ ವಾದವನ್ನು ಪುರಸ್ಕರಿಸಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !