ಸರ್ಕಾರಿ ಬಂಗಲೆ ಖಾಲೆ ಮಾಡಲು ತೇಜಸ್ವಿಗೆ ‘ಸುಪ್ರೀಂ’ ಸೂಚನೆ

ನವದೆಹಲಿ: ಉಪಮುಖ್ಯಮಂತ್ರಿಗಳ ಅಧಿಕೃತ ನಿವಾಸ ಖಾಲಿ ಮಾಡುವಂತೆ ಪಟ್ನಾ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ತೇಜಸ್ವಿ ಯಾದವ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಆದೇಶಿಸಿರುವ ಕೋರ್ಟ್, ನ್ಯಾಯಾಲಯದ ಸಮಯವನ್ನು ವ್ಯರ್ಥ ಮಾಡಿದ್ದಕ್ಕಾಗಿ ₹ 50 ಸಾವಿರ ದಂಡ ವಿಧಿಸಿದೆ.
ನ್ಯಾಯಮೂರ್ತಿಗಳಾದ ರಂಜನ್ ಗೊಗೊಯಿ, ದೀಪಕ್ ಗುಪ್ತಾ, ಸಂಜೀವ್ ಗುಪ್ತಾ ಅವರನ್ನೊಳಗೊಂಡ ಪೀಠ ಈ ತೀರ್ಪು ನೀಡಿದೆ.
ನಿತೀಶ್ ಕುಮಾರ್ ನೇತೃತ್ವದ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ವೇಳೆ ತೇಜಸ್ವಿ ಯಾದವ್ಗೆ ಈ ಬಂಗಲೆ ಮಂಜೂರಾಗಿತ್ತು.
ನಿತೀಶ್ ಅವರು ಆರ್ಜೆಡಿಯೊಂದಿಗೆ ಮೈತ್ರಿ ತೊರೆದು ಬಿಜೆಪಿಯೊಂದಿಗೆ ಸೇರಿ ಹೊಸ ಸರ್ಕಾರ ರಚಿಸಿದ್ದರು. ಆಗ ಈ ನಿವಾಸವನ್ನು ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿಗೆ ಮಂಜೂರಾಯಿತು.
ಆದರೆ ತೇಜಸ್ವಿ ನಿವಾಸ ತೊರೆಯಲು ನಿರಾಕರಿಸಿದರು. ಸರ್ಕಾರಿ ಆದೇಶದ ವಿರುದ್ಧ ಹೈಕೋರ್ಟ್ ಮೊರೆ ಹೋಗಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.