ಭಾನುವಾರ, ಜೂಲೈ 12, 2020
29 °C

ಎಸ್ಸೆಸ್ಸೆಲ್ಸಿಗೆ ಪರೀಕ್ಷೆಗೆ ತಡೆ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

PTI Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿಯ ಉಳಿದ ವಿಷಯಗಳ ಪರೀಕ್ಷೆಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಭಾನುವಾರ ವಜಾಗೊಳಿಸಿದೆ.

ರಾಜಸ್ಥಾನದಲ್ಲಿ ಹತ್ತನೇ ತರಗತಿಯ ಎರಡು ವಿಷಯಗಳಿಗೆ ಜೂನ್‌ 29 ಮತ್ತು 30ರಂದು ಪರೀಕ್ಷೆ ನಡೆಯಲಿದೆ. ಇದಕ್ಕೆ ತಡೆ ನೀಡಬೇಕು ಎಂದು ಕೋರಿ ಎಸ್ಸೆಸ್ಸೆಲ್ಸಿಯ ವಿದ್ಯಾರ್ಥಿಯ ತಾಯಿ ದೇವಿ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ವಿಡಿಯೊ ಸಂವಾದದ ಮೂಲಕ ನಡೆಸಿದ ನ್ಯಾಯಮೂರ್ತಿ ಎ.ಎಂ. ಖಾನ್‌ವಿಲ್ಕರ್‌, ದಿನೇಶ್‌ ಮಹೇಶ್ವರಿ ಮತ್ತು ಸಂಜೀವ್‌ ಖನ್ನಾ ಅವರಿದ್ದ ಪೀಠ, ಅರ್ಜಿಯನ್ನು ವಜಾಗೊಳಿಸಿತು ಎಂದು ರಾಜ್ಯ ಸರ್ಕಾರದ ಪರ ವಕೀಲ ಮನೀಷ್‌ ಸಿಂಘ್ವಿ ತಿಳಿಸಿದ್ದಾರೆ.

‘11.86 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಲಾಕ್‌ಡೌನ್‌ ಸಂದರ್ಭದಲ್ಲಿ 120ಕ್ಕೂ ಹೆಚ್ಚು ಶಾಲೆಗಳನ್ನು ಕ್ವಾರಂಟೈನ್‌ ಕೇಂದ್ರಗಳನ್ನಾಗಿ ಮಾಡಲಾಗಿತ್ತು. ಈ ಕೇಂದ್ರಗಳಲ್ಲಿ ಈಗ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೂ ಸೋಂಕು ತಗಲುವ ಸಾಧ್ಯತೆ ಇದೆ’ ಎಂದು ಅರ್ಜಿದಾರರು ಹೇಳಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು