ಬುಧವಾರ, ಜೂನ್ 3, 2020
27 °C

ಲಾಕ್‌ಡೌನ್: ಸೆಕ್ಷನ್ 188ರಡಿ ದಾಖಲಿಸಿದ್ದ ಪ್ರಕರಣಗಳ ರದ್ದು ಕೋರಿದ್ದ ಅರ್ಜಿ ವಜಾ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಲಾಕ್‌ಡೌನ್‌ ಅವಧಿಯಲ್ಲಿ ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯವೂ ಸೇರಿ ಐಪಿಸಿ ಸೆಕ್ಷನ್‌ ಅನ್ವಯ ದಾಖಲಾಗಿರುವ ವಿವಿಧ ಸಣ್ಣ ಪುಟ್ಟ ಪ್ರಕರಣ ರದ್ದುಪಡಿಸಲು ಕೋರಿದ್ದ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ಅಶೋಕ್‌ ಭೂಷಣ್‌ ಅವರು, ಅರ್ಜಿದಾರರ ಪರ ಹಾಜರಿದ್ದ ವಕೀಲರಿಗೆ ಸೆಕ್ಷನ್‌ 188 ಜಾರಿಗೊಳಿಸದೇ ಲಾಕ್‌ಡೌನ್‌ ಅನುಷ್ಠಾನ ಹೇಗೆ ಮಾಡುವುದು ಎಂದು ಪ್ರಶ್ನಿಸಿದರು.

ಉತ್ತರ ಪ್ರದೇಶದ ಮಾಜಿ ಡಿಜಿಪಿ ವಿಕ್ರಮ್‌ ಸಿಂಗ್ ಅಧ್ಯಕ್ಷರಾಗಿರುವ ಸೆಂಟರ್‌ ಫಾರ್ ಅಕೌಂಟಬಿಲಿಟಿ ಅಂಡ್ ಸಿಸ್ಟಮ್ಯಾಟಿಕ್‌ ಚೇಂಜ್ ಸಂಸ್ಥೆಯು ಅರ್ಜಿ ಸಲ್ಲಿಸಿದ್ದು, ಇವರ ಪರ ವಕೀಲರಾದ ಗೋಪಾಲ್ ಶಂಕರನಾರಾಯಣ್‌, ವಕೀಲ ವಿರಾಗ್‌ ಗುಪ್ತಾ ಹಾಜರಿದ್ದರು. 

ದೆಹಲಿಯ 50 ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮಾರ್ಚ್ 23ರಿಂದ ಏಪ್ರಿಲ್ 13ರ ನಡುವೆ ಸೆಕ್ಷನ್‌ 188ರ ಅನ್ವಯಯ 848 ಎಫ್‌ಐಆರ್ ದಾಖಲಾಗಿವೆ ಎಂದು ಸಂಸ್ಥೆ ತಿಳಿಸಿತು.

ಸೆಕ್ಷನ್‌ 188ರಡಿ ದಾಖಲಾಗಿರುವ ಪ್ರಕರಣಗಳಲ್ಲಿ ₹ 200 ದಂಡ ಮತ್ತು ಒಂದು ತಿಂಗಳು ಸಜೆ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ. ಜೀವಹಾನಿ, ಅನಾರೋಗ್ಯ ಕುರಿತಂತೆ ಸರ್ಕಾರಿ ಅಧಿಕಾರಿಗಳ ಸೂಚನೆಗಳ ನಿರ್ಲಕ್ಷಕ್ಕೆ ಸಂಬಂಧಿಸಿ 6 ತಿಂಗಳು ಸೆರೆವಾಸ ಅಥವಾ ರೂ 1,000 ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು