ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಫೇಲ್ ಒಪ್ಪಂದ: ಸುಪ್ರೀಂ ಕಣ್ಗಾವಲಿನಲ್ಲಿ ತನಿಖೆ ಇಲ್ಲ

ಎಲ್ಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ತಿರಸ್ಕರಿಸಿದ ಸರ್ವೋಚ್ಚ ನ್ಯಾಯಾಲಯ
Last Updated 14 ಡಿಸೆಂಬರ್ 2018, 6:17 IST
ಅಕ್ಷರ ಗಾತ್ರ

ನವದೆಹಲಿ: ರಫೇಲ್ ಯುದ್ಧವಿಮಾನ ಖರೀದಿ ಒಪ್ಪಂದದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸರ್ವೋಚ್ಚ ನ್ಯಾಯಾಲಯದ ಕಣ್ಗಾವಲಿನಲ್ಲಿ ತನಿಖೆ ನಡೆಸಬೇಕು ಎಂದು ಸಲ್ಲಿಕೆಯಾಗಿರುವ ಎಲ್ಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ.

ಪ್ರಕರಣದ ವಿಚಾರಣೆ ನಡೆಸಿದಮುಖ್ಯನ್ಯಾಯಮೂರ್ತಿಗಳಾದ ರಂಜನ್ ಗೊಗೊಯಿ, ಎಸ್‌. ಕೆ. ಕೌಲ್‌ ಹಾಗೂ ಕೆ. ಎಂ ಜೋಸೆಫ್ ನೇತೃತ್ವದ ಪೀಠ, ಬೆಲೆಯ ಪರಾಮರ್ಶೆ ನ್ಯಾಯಾಲಯದ ಕೆಲಸವಲ್ಲ’ ಎಂದು ಹೇಳಿತು.

ಪ್ರಕರಣಕ್ಕೆ ಸಂಬಂಧಿಸಿ ವಕೀಲ ಎಂ.ಎಲ್. ಶರ್ಮಾ ಎಂಬುವರು ಕೋರ್ಟ್ ಮೆಟ್ಟಿಲೇರಿದ್ದರು. ಬಳಿಕ ವಿನೀತ್ ಧಂಡಾ ಎಂಬುವರು ಅರ್ಜಿ ಸಲ್ಲಿಸಿದ್ದರು. ಎಎಪಿ ಮುಖಂಡ ಸಂಜಯ್ ಸಿಂಗ್ ಅವರೂ ಕೋರ್ಟ್ ನಿಗಾದಲ್ಲಿ ತನಿಖೆಗೆ ಆಗ್ರಹಿಸಿದ್ದರು.

ರಫೇಲ್ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು, ಎಫ್ಐಆರ್ ದಾಖಲಿಸಲು ಸಿಬಿಐಗೆ ನಿರ್ದೇಶನ ನೀಡುವಂತೆ ಕೋರಿ ಕೇಂದ್ರದ ಮಾಜಿ ಸಚಿವರಾದ ಯಶವಂತ್ ಸಿನ್ಹಾ, ಅರುಣ್ ಶೌರಿ, ವಕೀಲ ಪ್ರಶಾಂತ್ ಭೂಷಣ್ ಅವರು ಸುಪ್ರೀಂ ಕದ ತಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT