ಶನಿವಾರ, ಫೆಬ್ರವರಿ 29, 2020
19 °C
ಸಿಎಎ ವಿರುದ್ಧದ ಅರ್ಜಿಗಳಿಗೆ ಪ್ರತಿಕ್ರಿಯಿಸಲು ಕೇಂದ್ರಕ್ಕೆ ನಾಲ್ಕು ವಾರಗಳ ಗಡುವು

ಪೌರತ್ವ (ತಿದ್ದುಪಡಿ) ಕಾಯ್ದೆ ತಡೆಗೆ 'ಸುಪ್ರೀಂ' ನಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಗೆ (ಸಿಎಎ) ತಡೆ ನೀಡಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಅಲ್ಲದೆ ಸಿಎಎ ವಿರುದ್ಧದ ಅರ್ಜಿಗಳಿಗೆ ಪ್ರತಿಕ್ರಿಯಿಸಲು ಕೇಂದ್ರಕ್ಕೆ ನಾಲ್ಕು ವಾರಗಳ ಗಡುವು ನೀಡಿದೆ. 

ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳದೆ ಪೌರತ್ವ (ತಿದ್ದುಪಡಿ) ಕಾಯ್ದೆಗೆ ತಡೆ ನೀಡಲು ಸಾಧ್ಯವಿಲ್ಲ. ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಸಾಂವಿಧಾನಿಕ ಪೀಠ ಪ್ರಕರಣದ ವಿಚಾರಣೆ ನಡೆಸಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. 

ಸಿಎಎಗೆ ಸಂಬಂಧಿಸಿದ 143 ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬಡೆ ಅವರನ್ನೊಳಗೊಂಡ ನ್ಯಾಯಪೀಠ, ಈಗ ಸಲ್ಲಿಕೆಯಾಗಿರುವ ಅರ್ಜಿಗಳು ಬಗೆಹರಿಯದ ಹೊರತು ಸಿಎಎ ಸಂಬಂಧಿತ ಅರ್ಜಿಗಳ ವಿಚಾರಣೆ ನಡೆಸದಂತೆ ಎಲ್ಲಾ ಹೈಕೋರ್ಟ್‌ಗಳಿಗೂ ನಿರ್ಬಂಧ ಹೇರಿದೆ.

ಅಸ್ಸಾಂ ಮತ್ತು ತ್ರಿಪುರದಲ್ಲಿ ಸಿಎಎ ಸಂಬಂಧಿತ ಸಮಸ್ಯೆ ದೇಶದ ಇತರ ಭಾಗಗಳಿಗಿಂತ ಭಿನ್ನವಾಗಿರುವುದರಿಂದ ಈ ಎರಡು ರಾಜ್ಯಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಮೂರ್ತಿಗಳಾದ ಎಸ್‌.ಅಬ್ದುಲ್‌ ನಜೀರ್ ಮತ್ತು ಸಂಜೀವ್ ಖನ್ನಾ ಅವರನ್ನೂ ಒಳಗೊಂಡ ನ್ಯಾಯಪೀಠ ತಿಳಿಸಿದೆ.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು