ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಯೋಗದ ಪ್ರತಿಕ್ರಿಯೆ ಕೇಳಿದ ‘ಸುಪ್ರೀಂ’

Last Updated 30 ಏಪ್ರಿಲ್ 2019, 19:42 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಚುನಾವಣಾ ಪ್ರಚಾರ ಸಭೆಗಳಲ್ಲಿ ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಕಾಂಗ್ರೆಸ್‌ನ ಸಂಸದೆ ಸುಶ್ಮಿತಾ ದೇವ್‌ ನೀಡಿರುವ ದೂರಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.

‘ಮೋದಿ ಹಾಗೂ ಶಾ ಅವರು ಪದೇ ಪದೇ ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಆಯೋಗಕ್ಕೆ ದೂರು ಕೊಟ್ಟಿದ್ದರೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಈ ವಿಚಾರದಲ್ಲಿ ಆಯೋಗವು ಭೇದಭಾವ ಮಾಡುತ್ತಿದೆ. ಇದು ಚುನಾವಣಾ ವ್ಯವಸ್ಥೆಗೆ ಮಾರಕವಾಗಿದೆ’ ಎಂದು ಸುಶ್ಮಿತಾ ಅವರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಪೀಠವು ಆಯೋಗಕ್ಕೆ ಈ ಸೂಚನೆ ನೀಡಿ, ಗುರುವಾರ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳುವುದಾಗಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT