ಬಾಬ್ರಿ ಮಸೀದಿ: ವಿಚಾರಣೆ ವರದಿ ಕೇಳಿದ ‘ಸುಪ್ರೀಂ’

7

ಬಾಬ್ರಿ ಮಸೀದಿ: ವಿಚಾರಣೆ ವರದಿ ಕೇಳಿದ ‘ಸುಪ್ರೀಂ’

Published:
Updated:

ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಯನ್ನು ಗಡುವಿನೊಳಗೆ (2019ರ ಏಪ್ರಿಲ್‌) ಹೇಗೆ ಮುಗಿಸುತ್ತೀರಿ ಎಂದು ಮುಚ್ಚಿದ ಲಕೋಟೆಯಲ್ಲಿ ಉತ್ತರ ನೀಡುವಂತೆ ಲಖನೌ ಕೋರ್ಟ್‌ನ ಸೆಷನ್ಸ್‌ ನ್ಯಾಯಾಧೀ ಶರಿಗೆ ಸುಪ್ರೀಂಕೋರ್ಟ್‌ ಸೂಚಿಸಿದೆ. 

ಬಿಜೆಪಿ ನಾಯಕರಾದ ಎಲ್.ಕೆ. ಅಡ್ವಾಣಿ, ಮುರಳಿಮನೋಹರ ಜೋಶಿ ಹಾಗೂ ಉಮಾ ಭಾರತಿ ಅವರು ಒಳಗೊಂಡಿರುವ ಈ ಪ್ರಕರಣದ ವಿಚಾರಣೆಯನ್ನು ಸೆಷನ್ಸ್‌ ನ್ಯಾಯಾಲಯ ನಡೆಸುತ್ತಿದ್ದು, ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಆರ್.ಎಫ್‌. ನಾರಿಮನ್‌ ಮತ್ತು ಇಂದೂ ಮಲ್ಹೋತ್ರಾ ಅವರನ್ನೊಳಗೊಂಡ ಪೀಠ ಈ ಸೂಚನೆ ನೀಡಿದೆ.

ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಅಧೀನ ನ್ಯಾಯಾಲಯದ ನ್ಯಾಯಾಧೀಶ ಎಸ್.ಕೆ. ಯಾದವ್‌ ಅವರ ಬಡ್ತಿಗೆ ಅಲಹಾಬಾದ್‌ ಹೈಕೋರ್ಟ್‌ ತಡೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೂ ನಿರ್ದೇಶನ ನೀಡಿದೆ.

‌ರಾಜಕೀಯವಾಗಿ ಸೂಕ್ಷ್ಮವಾಗಿರುವ ಈ ಪ್ರಕರಣದಲ್ಲಿ ಈ ನಾಯಕರ ಪಾತ್ರದ ಬಗ್ಗೆ ಸಮಗ್ರವಾಗಿ ವಿಚಾರಣೆ ನಡೆಸುವಂತೆ 2017ರ ಏಪ್ರಿಲ್‌ 19ರಂದು ಸುಪ್ರೀಂಕೋರ್ಟ್‌ ಅಧೀನ ನ್ಯಾಯಾಲಯಕ್ಕೆ ಹೇಳಿದ್ದು, 2019ರ ಏಪ್ರಿಲ್‌ 19ರೊಳಗೆ ವಿಚಾರಣೆ ಪೂರ್ಣಗೊಳಿಸುವಂತೆ ಸೂಚಿಸಿತ್ತು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !