ರಫೇಲ್‌ ಒಪ್ಪಂದ: ಮೇಲ್ಮನವಿ ವಿಚಾರಣೆ ಇಂದು

7

ರಫೇಲ್‌ ಒಪ್ಪಂದ: ಮೇಲ್ಮನವಿ ವಿಚಾರಣೆ ಇಂದು

Published:
Updated:

ನವದೆಹಲಿ: ರಫೇಲ್‌ ಯುದ್ಧ ವಿಮಾನ ಖರೀದಿ ವಿಚಾರವಾಗಿ ತನಿಖೆಗೆ ಆದೇಶಿಸಬೇಕು ಎಂದು ಕೇಂದ್ರದ ಮಾಜಿ ಸಚಿವರಾದ ಯಶವಂತ್ ಸಿನ್ಹಾ, ಅರುಣ್ ಶೌರಿ ಸೇರಿದಂತೆ ಹಲವರು ಸಲ್ಲಿಸಿರುವ ಮೇಲ್ಮನವಿ ಹಾಗೂ ಒಪ್ಪಂದದ ನಿರ್ಧಾರ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಲ್ಲಿಸಿರುವ ವಿವರಗಳ ಮೇಲಿನ ನಿರ್ಣಾಯಕ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಇಂದು (ಬುಧವಾರ) ನಡೆಸಲಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ, ನ್ಯಾಯಮೂರ್ತಿಗಳಾದ ಎಸ್‌.ಕೆ. ಕೌಲ್‌ ಹಾಗೂ ಕೆ.ಎಂ.ಜೋಸೆಫ್‌ ಅವರನ್ನೊಳಗೊಂಡ ಸಾಂವಿಧಾನಿಕ ಪೀಠ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.

ರಫೇಲ್‌ ಒಪ್ಪಂದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ್ದ ಗೊಗೊಯಿ ನೇತೃತ್ವದ ಪೀಠ ಅರ್ಜಿದಾರರಿಗೆ ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಅಕ್ಟೋಬರ್‌ 31 ರಂದು ಆದೇಶಿಸಿತ್ತು.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ಗೆ ರಫೆಲ್‌ ಒಪ್ಪಂದದ ಮಾಹಿತಿ ಸಲ್ಲಿಸಿದ ಕೇಂದ್ರ ಸರ್ಕಾರ

ಬಳಿಕ ಕೇಂದ್ರ ಸರ್ಕಾರವು ‘36 ರಫೇಲ್‌ ಯುದ್ಧ ವಿಮಾನ ಖರೀದಿ ನಿರ್ಧಾರ ಪ್ರಕ್ರಿಯೆ ವಿವರ’ ಎಂಬ ಶೀರ್ಷಿಕೆ ಅಡಿಯಲ್ಲಿ 14 ಪುಟಗಳ ದಾಖಲೆಯನ್ನು ಸೋಮವಾರ ಸುಪ್ರೀಂಗೆ ಸಲ್ಲಿಸಿತ್ತು.

ಯುದ್ಧ ವಿಮಾನ ತಯಾರಿಕಾ ಸಂಸ್ಥೆ ಡಸಾಲ್ಟ್‌, ಅನಿಲ್‌ ಅಂಬಾನಿ ಅವರ ‘ರಕ್ಷಣಾ ಕಂಪೆನಿ’ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಕೇಂದ್ರ ಸಚಿವರೂ ಇದರಲ್ಲಿ ಭಾಗಿಯಾಗಿದ್ದು, ಇದು ದೇಶದ ಅತ್ಯಂತ ದೊಡ್ಡ ರಕ್ಷಣಾ ಹಗರಣ. ಹಗರಣವನ್ನು ಮುಚ್ಚಿ ಹಾಕಲು ಕೇಂದ್ರ ಸರ್ಕಾರವು ಪ್ರಯತ್ನಿಸುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !