ಮಂಗಳವಾರ, ಫೆಬ್ರವರಿ 25, 2020
19 °C

ಶಾಲಾ ವಾಹನದಿಂದ ಬಿದ್ದು ಬಾಲಕಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಗೋರಖ್‌ಪುರ, ಉತ್ತರಪ್ರದೇಶ (ಪಿಟಿಐ): ಶಾಲಾ ವಾಹನದಿಂದ ಬಿದ್ದು 10 ವರ್ಷದ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಕುಶಿನಗರ ಜಿಲ್ಲೆಯ ಸಾರಂಗ್‌ಛಾಪ್ರ ಗ್ರಾಮದಲ್ಲಿ ಶನಿವಾರ ನಡೆದಿದೆ. 

ಮದನೌರ್‌ ಸುಕ್ರೌಲಿ ಗ್ರಾಮದ ಶಾಲೆಯಿಂದ ಕರೆದೊಯ್ಯುತ್ತಿದ್ದಾಗ ಘಟನೆ ಸಂಭವಿಸಿದೆ. ವಾಹನದ ಸಾಮರ್ಥ್ಯಕ್ಕಿಂತ ಅಧಿಕ ವಿದ್ಯಾರ್ಥಿಗಳನ್ನು ಕರೆದೊಯ್ದಿರುವುದು ಮತ್ತು ಚಾಲಕ, ರಸ್ತೆಯ ತಿರುವಿನಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸಿದ್ದರಿಂದ ವಾಹನದ ಬಾಗಿಲಿನ ಸಮೇತ ಬಾಲಕಿ ಉರುಳಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. 

10 ವಿದ್ಯಾರ್ಥಿಗಳಲ್ಲಿ ಉಳಿದ 9 ಮಂದಿ ಆರೋಗ್ಯದಿಂದ ಇದ್ದಾರೆ. ಚಾಲಕ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡು ಹುಡುಕಾಟ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು