ಸುರಕ್ಷತಾ ಕ್ರಮ ಅಳವಡಿಸಿಕೊಳ್ಳದ ಶಾಲಾ ಬಸ್‌ ಮಾಲೀಕರಿಗೆ ದಂಡ

ಭಾನುವಾರ, ಜೂಲೈ 21, 2019
27 °C

ಸುರಕ್ಷತಾ ಕ್ರಮ ಅಳವಡಿಸಿಕೊಳ್ಳದ ಶಾಲಾ ಬಸ್‌ ಮಾಲೀಕರಿಗೆ ದಂಡ

Published:
Updated:

ನೊಯ್ಢಾ: ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳದ ಗ್ರೇಟರ್‌ ನೊಯ್ಡಾದ 427 ಶಾಲಾ ಬಸ್‌ಗಳ ಮಾಲೀಕರಿಗೆ  ‘ಚಲನ್‌’ಗಳನ್ನು ನೀಡಲಾಗಿದ್ದು, ಈ ಮೂಲಕ ₹ 26, 700 ದಂಡ ವಸೂಲು ಮಾಡಲಾಗಿದೆ. 

‘ಆಪ‍ರೇಷನ್‌ ಕ್ಲೀನ್‌’ ಎಂಬ ವಿಶೇಷ ಕಾರ್ಯಕ್ರಮದಡಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ನಗರದ ವ್ಯಾಪ್ತಿಯಲ್ಲಿ ಬರುವ 129 ಶಾಲೆಗಳಲ್ಲಿ ಇದನ್ನು ಜಾರಿಗೊಳಿಸಲಾಗಿದೆ. ನಿತ್ಯ ಬೆಳಗ್ಗೆ 6.30ಕ್ಕೆ ಬಸ್‌ಗಳನ್ನು ಪರಿಶೀಲಿಸಲಾಗುತ್ತಿದೆ. ಅಭಿಯಾನ ಮಾದರಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಗೌತಮ ಬುದ್ಧ ನಗರದ ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ ವೈಭವ್‌ ಕೃಷ್ಣ ಹೇಳಿದ್ದಾರೆ.

ವಾಹನದ ಸಾಮರ್ಥ್ಯಕ್ಕಿಂತ ಹೆಚ್ಚು ಮಕ್ಕಳನ್ನು ತುಂಬುವುದು, ಸಂಚಾರ ನಿಯಮ ಉಲ್ಲಂಘನೆ ಮತ್ತು ಮಕ್ಕಳ ರಕ್ಷಣಾ ನಿರ್ಲಕ್ಷ್ಯದ ಕುರಿತು ಸಾರ್ವಜನಿಕರು ದೂರು ನೀಡಿದ್ದರು. ಈ ಆಧಾರದ ಮೇಲೆ ಕಾರ್ಯಾಚರಣೆ ಆರಂಭಿಸಲಾಗಿದೆ. 702 ಬಸ್‌ ಮತ್ತು ವ್ಯಾನ್‌ಗಳಿಗೆ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !