ಶನಿವಾರ, ಡಿಸೆಂಬರ್ 7, 2019
21 °C

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಸಿಆರ್‌ಪಿಎಫ್‌ ಯೋಧ ಸೇರಿ ನಾಲ್ವರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಮಿರ್ಜಾಪುರ್‌: ಉತ್ತರ ಪ್ರದೇಶದ ಮಿರ್ಜಾಪುರ್‌ ಜಿಲ್ಲೆಯಲ್ಲಿ ಸಿಆರ್‌ಪಿಎಫ್‌ ಯೋಧ ಸಹಿತ ನಾಲ್ವರು ಸೇರಿಕೊಂಡು ಪ್ರೌಢಶಾಲಾ ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಸೋಮವಾರ ರಾತ್ರಿ 15 ವರ್ಷ ವಯಸ್ಸಿನ ವಿದ್ಯಾರ್ಥಿನಿಯನ್ನು ತಮ್ಮ ವಾಹನದಲ್ಲಿ ಹಲಿಯಾ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಸಂತ್ರಸ್ತೆಯ ತಂದೆ ದೂರು ನೀಡಿದ್ದು, ಪೋಕ್ಸೊ ಕಾಯ್ದೆ ಅಡಿ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಇನ್‌ಸ್ಪೆಕ್ಟರ್‌ ದಾವಿದಾರ್‌ ಶುಕ್ಲಾ ತಿಳಿಸಿದ್ದಾರೆ.

‘ಆರೋಪಿಗಳು ವಿದ್ಯಾರ್ಥಿನಿಯ ತಾಯಿಯನ್ನು ಅಂದು ರಾತ್ರಿ 10ಕ್ಕೆ ಕರೆದಿದ್ದಾರೆ. ಮಗಳು ಮನೆಯಿಂದ ಹೊರಗೆ ಬರುತ್ತಿದ್ದಂತೆ ಈಕೆಯನ್ನು ವಾಹನದಲ್ಲಿ ಅಪಹರಿಸಿಕೊಂಡು ಹೋಗಿದ್ದಾರೆ. ಕೆಲವು ಗಂಟೆಗಳ ನಂತರ ಆರೋಪಿಗಳು ವಿದ್ಯಾರ್ಥಿನಿಯನ್ನು ಕರೆದುಕೊಂಡು ಮನೆ ಸಮೀಪ ಬರುತ್ತಿದ್ದಂತೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದರು. ತಕ್ಷಣವೇ ಸ್ಥಳಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

‘ಸಿಆರ್‌ಪಿಎಫ್‌ ಯೋಧ ಮಹೇಂದ್ರ ಕುಮಾರ್‌ ಯಾದವ್‌, ಗಣೇಶ ಪ್ರಸಾದ್‌ ಬಿಂದ್‌, ಲವ್‌ಕುಶ್‌ ಪಾಲ್‌ ಹಾಗೂ ಜೈ ಪ್ರಕಾಶ್‌ ಮೌರ್ಯ ಬಂಧಿತ ಆರೋಪಿಗಳು. ಸಂತ್ರಸ್ತೆಯನ್ನು ಹಾಗೂ ಬಂಧಿತರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ತನಿಖೆ ಮುಂದುವರಿದಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಧರಮವೀರ್‌ ಸಿಂಗ್‌ ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು