ಭಯೋತ್ಪಾದನೆ ವಿರುದ್ಧ ಹೋರಾಡಲು ಎಲ್ಲ ರಾಷ್ಟ್ರಗಳು ಒಂದಾಗಬೇಕು: ಮೋದಿ

ಬುಧವಾರ, ಜೂನ್ 26, 2019
22 °C

ಭಯೋತ್ಪಾದನೆ ವಿರುದ್ಧ ಹೋರಾಡಲು ಎಲ್ಲ ರಾಷ್ಟ್ರಗಳು ಒಂದಾಗಬೇಕು: ಮೋದಿ

Published:
Updated:

ಬಿಷ್ಕೆಕ್‌: ಭಯೋತ್ಪಾದನೆಯ ಪಿಡುಗಿನ ವಿರುದ್ಧ ಹೋರಾಡುವುದಕ್ಕಾಗಿ ಉಗ್ರ ಕೃತ್ಯಗಳಿಗೆ ಪ್ರಾಯೋಜಕತ್ವ ನೀಡುವ, ಪ್ರೋತ್ಸಾಹಿಸುವ ಮತ್ತು ಧನ ಸಹಾಯ ಮಾಡುವ ರಾಷ್ಟ್ರಗಳನ್ನು ಹೊಣೆಯಾಗಿಸಬೇಕು ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಕಿರ್ಗಿಸ್ತಾನ್‌ ರಾಜಧಾನಿ ಬಿಷ್ಕೆಕ್‌ನಲ್ಲಿ ಗುರುವಾರ ಆರಂಭವಾದ ಶಾಂಘೈ ಸಹಕಾರ ಸಂಘದ (ಎಸ್‌ಸಿಒ) ಶೃಂಗಸಭೆಯಲ್ಲಿ ಮಾತನಾಡಿದ ಮೋದಿ,  ಭಯೋತ್ಪಾದನೆ ವಿರುದ್ಧ ಹೋರಾಡಲು ಎಲ್ಲರ ಸಹಕಾರ ಅಗತ್ಯ. ಭಾರತ ಭಯೋತ್ಪಾದನೆ ಮುಕ್ತ ಸಮಾಜವನ್ನು ಬಯಸುತ್ತದೆ ಎಂದಿದ್ದಾರೆ.

ನಾನು ಕಳೆದ ಭಾನುವಾರ ಶ್ರೀಲಂಕಾಗೆ ಭೇಟಿ ನೀಡಿದಾಗ, ಸೇಂಟ್ ಆ್ಯಂಟನೀಸ್ ಚರ್ಚ್‌ಗೆ ಭೇಟಿ ನೀಡಿದ್ದೆ. ಅಲ್ಲಿ ಮುಗ್ಧ ಜೀವಗಳನ್ನು ಬಲಿತೆಗೆದುಕೊಂಡ  ಭಯೋತ್ಪಾದನೆಯ ಕರಾಳ ಮುಖದ ದರ್ಶನವಾಯಿತು. ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಎಲ್ಲ ರಾಷ್ಟ್ರಗಳು ಒಂದಾಗಬೇಕು ಎಂದು ಮೋದಿ ಹೇಳಿದ್ದಾರೆ.  ಈ ಶೃಂಗಸಭೆಯಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕೂಡಾ ಉಪಸ್ಥಿತರಿದ್ದರು.

ಇದನ್ನೂ ಓದಿ: ಮೋದಿ ಆಹ್ವಾನ ಸ್ವೀಕರಿಸಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಷಿ ಜಿನ್‌ಪಿಂಗ್‌

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 3

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !