ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ; ಪುಲ್ವಾಮಾದಲ್ಲಿ ಮುಂದುವರಿದ ಕಾರ್ಯಾಚರಣೆ

Last Updated 18 ಜೂನ್ 2020, 7:33 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು–ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಗುರುವಾರ ಬೆಳಿಗ್ಗೆ ಕಾರ್ಯಾಚರಣೆ ಆರಂಭಿಸಿದ್ದು, ಒಬ್ಬ ಉಗ್ರನನ್ನು ಹೊಡೆದುರುಳಿಸಿವೆ.

ಪುಲ್ವಾಮಾದ ಪಾಂಪೋರಿ ಬಳಿಯ ಮೀಜ್‌ನಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದ ಭದ್ರತಾ ಪಡೆಗಳು, ನಂತರ ಉಗ್ರರು ಅಡಗಿದ್ದ ಜಾಗವನ್ನು ಸುತ್ತುವರಿದವು. ಉಗ್ರರು ಗುಂಡಿನ ದಾಳಿ ಆರಂಭಿಸಿದಾಗ, ಅದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಸಹ ದಾಳಿ ನಡೆಸಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಮಂಗಳವಾರ ಶೋಪಿಯಾನ್‌ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೂವರು, ಕುಲ್ಗಾಂ ಜಿಲ್ಲೆಯಲ್ಲಿ ಶನಿವಾರ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಕೇಂದ್ರಾಡಳಿತ ಪ್ರದೇಶದಲ್ಲಿ ಈ ವರ್ಷ ಕೈಗೊಂಡಿರುವ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ವಿವಿಧ ಭಯೋತ್ಪಾದಕ ಸಂಘಟನೆಗಳ 12 ಜನ ಕಮಾಂಡರ್‌ಗಳನ್ನು ಸೇರಿದಂತೆ 100ಕ್ಕೂ ಅಧಿಕ ಜನ ಉಗ್ರರನ್ನು ಹತ್ಯೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT