ಮಂಗಳವಾರ, ಮೇ 18, 2021
28 °C

ಅಯೋಧ್ಯೆ: ಇಂದು ‘ಧರ್ಮ ಸಭೆ’

ರಾಯಿಟರ್ಸ್/ಪಿಟಿಐ Updated:

ಅಕ್ಷರ ಗಾತ್ರ : | |

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಸಂಬಂಧ ಸರ್ಕಾರದ ಮೇಲೆ ಒತ್ತಡ ಹೇರಲು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಭಾನುವಾರ ಇಲ್ಲಿ ಆಯೋಜಿಸಿರುವ ‘ಧರ್ಮ ಸಭೆ’ಯಲ್ಲಿ ಭಾಗವಹಿಸಲು ಸಾವಿರಾರು ಸಂಖ್ಯೆಯಲ್ಲಿ ಸಂತರು ಮತ್ತು ಧಾರ್ಮಿಕ ನಾಯಕರು ಇಲ್ಲಿ ಸೇರಿದ್ದಾರೆ.

ವಿಎಚ್‌ಪಿ ಕಾರ್ಯಕರ್ತರೂ ಸಾವಿರಾರು ಸಂಖ್ಯೆಯಲ್ಲಿ ಅಯೋಧ್ಯೆಗೆ ಬಂದಿಳಿಯುತ್ತಿದ್ದಾರೆ.

‘ಧರ್ಮಸಭೆಯಲ್ಲಿ 2 ಲಕ್ಷಕ್ಕೂ ಹೆಚ್ಚು ಜನರು ಸೇರಲಿದ್ದಾರೆ. 1992ರಲ್ಲಿ ಸೇರಿದ್ದಕ್ಕಿಂತ ಹಲವು ಪಟ್ಟು ಹೆಚ್ಚು ಜನ ಈ ಬಾರಿ ಅಯೋಧ್ಯೆಯಲ್ಲಿ ಸೇರಲಿದ್ದಾರೆ’ ಎಂದು ವಿಎಚ್‌ಪಿಯ ಅಖಿಲ ಭಾರತ ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು