ಅಲಿಗಡ ಮುಸ್ಲಿಂ ವಿ.ವಿ. ಇಬ್ಬರು ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

7
ದೇಶವಿರೋಧಿ ಘೋಷಣೆ ಕೂಗಿದ ಆರೋಪ

ಅಲಿಗಡ ಮುಸ್ಲಿಂ ವಿ.ವಿ. ಇಬ್ಬರು ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

Published:
Updated:

ನವದೆಹಲಿ: ದೇಶ ವಿರೋಧಿ ಘೋಷಣೆಗಳನ್ನು ಕೂಗಿದ ಆರೋಪದಲ್ಲಿ ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ ಇಬ್ಬರು ಸಂಶೋಧನಾ ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ.

ಜೀವರಸಾಯನ ಶಾಸ್ತ್ರ, ಇತಿಹಾಸ ವಿಷಯಗಳಲ್ಲಿ ಪಿಎಚ್‌ಡಿ ಸಿದ್ಧಪಡಿಸುತ್ತಿರುವ ವಾಸಿಮ್ ಅಯುಬ್ ಮಲಿಕ್ ಮತ್ತು ಅಬ್ದುಲ್ ಹಸೀಬ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಲಿಗಡ ಎಸ್‌ಎಸ್‌ಪಿ ಅಜಯ್ ಕುಮಾರ್ ಸಾಹ್ನಿ ತಿಳಿಸಿದ್ದಾರೆ.

ಗುರುವಾರ ಭದ್ರತಾಪಡೆಗಳ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಹಿಜ್ಬುಲ್‌ ಮುಜಾಹಿದೀನ್‌ ಉಗ್ರ ಮನನ್‌ ಬಷೀರ್‌ ವಾನಿ ಸ್ಮರಣಾರ್ಥ ನಡೆಸಿದ ಸಭೆಯಲ್ಲಿ ಆರೋಪಿಗಳು ದೇಶ ವಿರೋಧಿ ಘೋಷಣೆ ಕೂಗಿದ್ದಾರೆ. ಸಭೆಯ ವಿಡಿಯೊ ಲಭ್ಯವಾಗಿದ್ದು, ಅದರಲ್ಲಿ ಆರೋಪಿಗಳು ದೇಶವಿರೋಧಿ ಘೋಷಣೆ ಕೂಗಿರುವುದು ಕಂಡುಬಂದಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಇಬ್ಬರು ಹಿಜ್ಬುಲ್‌ ಉಗ್ರರ ಹತ್ಯೆ

ಉಗ್ರ ಮನನ್‌ ಬಷೀರ್‌ ವಾನಿ ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪಿಎಚ್‌.ಡಿ ಸಂಶೋಧನಾ ವಿದ್ಯಾರ್ಥಿಯಾಗಿದ್ದು, ಈಚೆಗೆ ಉಗ್ರ ಸಂಘಟನೆ ಸೇರಿದ್ದ.

ಇದನ್ನೂ ಓದಿ: ಕಾಶ್ಮೀರದಲ್ಲಿ ‍ಪ್ರತಿಭಟನೆ: ಜನಜೀವನ ಅಸ್ತವ್ಯಸ್ತ

ಬರಹ ಇಷ್ಟವಾಯಿತೆ?

 • 8

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !