ಸೋಮವಾರ, ಅಕ್ಟೋಬರ್ 21, 2019
21 °C

ಪ್ರಧಾನಿಗೆ ಪತ್ರ ಬರೆದಿದ್ದ 49 ಗಣ್ಯರ ವಿರುದ್ಧದ ದೇಶದ್ರೋಹ ಪ್ರಕರಣ ರದ್ದು

Published:
Updated:

ಪಟ್ನಾ: ಗುಂಪುಹಲ್ಲೆ–ಹತ್ಯೆಯನ್ನು ನಿಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗಪತ್ರ ಬರೆದಿದ್ದ 49 ಗಣ್ಯರ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣವನ್ನು ಬಿಹಾರ ಪೊಲೀಸರು ಕೈಬಿಟ್ಟಿದ್ದಾರೆ.

‘ದುರುದ್ದೇಶದಿಂದ ಗಣ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಅವರ ವಿರುದ್ಧದ ಆರೋಪಗಳಿಗೆ ಯಾವುದೇ ಆಧಾರಗಳಿಲ್ಲ ಎಂಬುದು ತನಿಖೆ ವೇಳೆ ಪತ್ತೆಯಾಯಿತು. ಹೀಗಾಗಿ ಪ್ರಕರಣವನ್ನು ರದ್ದು ಮಾಡುವಂತೆ ಆದೇಶಿಸಿದ್ದೇನೆ’ ಎಂದು ಮುಜಪ್ಫರಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಕುಮಾರ್ ಸಿನ್ಹಾ ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿಗೆ ಪತ್ರ| ‘ಧ್ವನಿ ದಮನದ ವಿರುದ್ಧ ಇನ್ನೂ ಜೋರು ದನಿ’

‘ಗಣ್ಯರು ಪ್ರಧಾನಿಗೆ ಬರೆದ ಪತ್ರದಿಂದ ದೇಶದ ಘನತೆಗೆ ಧಕ್ಕೆಯಾಗಿದೆ. ಇವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲು ಪೊಲೀಸರಿಗೆ ನಿರ್ದೇಶನ ನೀಡಿ’ ಎಂದು ಮುಜಪ್ಫರಪುರದ ವಕೀಲರೊಬ್ಬರು ಅಲ್ಲಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಿದ್ದರು. ಪತ್ರ ಬರೆದವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿತ್ತು. ಈ ಕ್ರಮದ ವಿರುದ್ಧ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

Post Comments (+)