ದೇಶದ್ರೋಹ ಕಾನೂನು ರದ್ದು ಇಲ್ಲ: ಕೇಂದ್ರ

7

ದೇಶದ್ರೋಹ ಕಾನೂನು ರದ್ದು ಇಲ್ಲ: ಕೇಂದ್ರ

Published:
Updated:

ನವದೆಹಲಿ: ದೇಶದ್ರೋಹ ಕಾನೂನು ರದ್ದುಪಡಿಸುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಕಾನೂನಿನ ಅಡಿಯಲ್ಲಿನ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತಿದೆ.

ಲೋಕಸಭೆಯಲ್ಲಿ ಈ ಬಗ್ಗೆ ಲಿಖಿತ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಹನ್ಸರಾಜ್‌ ಅಹಿರ್‌, ‘ಬ್ರಿಟಿಷರ ಕಾಲದ ಈ ಕಾನೂನಿಗೆ ತಿದ್ದುಪಡಿ ಮಾಡುವ ಪ್ರಸ್ತಾವವನ್ನು ಸರ್ಕಾರ ಸದ್ಯಕ್ಕೆ ಪರಿಗಣಿಸಿಲ್ಲ’ ಎಂದು ತಿಳಿಸಿದ್ದಾರೆ.

‘ಕಾನೂನುಗಳಿಗೆ ತಿದ್ದುಪಡಿ ಮಾಡುವುದು ನಿರಂತರ ಪ್ರಕ್ರಿಯೆ. ರಾಜ್ಯ ಸರ್ಕಾರಗಳು ಸೇರಿದಂತೆ ತಜ್ಞರ ಜತೆ ಸಮಾಲೋಚನೆ ಮಾಡಿ ತಿದ್ದುಪಡಿ ಮಾಡಲಾಗುತ್ತಿದೆ’ ಎಂದು ವಿವರಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !