ಗುರುವಾರ , ಜೂಲೈ 9, 2020
23 °C

ಬಡವರ ಮತ್ತು ವಲಸೆ ಕಾರ್ಮಿಕರ ನೋವಿಗೆ ಸ್ಪಂದಿಸಲು ಒತ್ತಾಯಿಸಿ ಕಾಂಗ್ರೆಸ್ ಅಭಿಯಾನ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Sonia Gandhi

ನವದೆಹಲಿ: ದೇಶದಲ್ಲಿನ ವಲಸೆ ಕಾರ್ಮಿಕರು ಮತ್ತು ಬಡವರ ಸಂಕಷ್ಟಗಳ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ನ ಹಿರಿಯ ನಾಯಕರು ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನವನ್ನು ಆರಂಭಿಸಿದ್ದಾರೆ.

#SpeakUpIndia ಎಂಬ ಈ ಅಭಿಯಾನದಲ್ಲಿ  ಮಾತನಾಡಿದ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಬಡವರ ಮತ್ತು ವಲಸೆ ಕಾರ್ಮಿಕರನ್ನು ಮೋದಿ ಸರ್ಕಾರ ಕಡೆಗಣಿಸಿದೆ ಎಂದು ಆರೋಪಿಸಿದ್ದಾರೆ. 

ಭಾರತಕ್ಕೆ ಸ್ವಾತಂತ್ರ್ಯ ಲಭಿಸಿದ ನಂತರ ಇದೇ ಮೊದಲ ಬಾರಿ ಇಷ್ಟೊಂದು ನೋವು, ಸಂಕಷ್ಟ ಅನುಭವಿಸಿದ್ದು. ಲಕ್ಷಗಟ್ಟಲೆ ಕಾರ್ಮಿಕರು ಅನ್ನ, ನೀರು ಸಿಗದೆ ಬರಿಗಾಲಲ್ಲಿ ನಡೆಯುತ್ತಿದ್ದಾರೆ. ಅವರಿಗೆ ಔಷಧಿ ಸಿಗುತ್ತಿಲ್ಲ  ಆದರೂ ಮನೆ ಸೇರಲು ಅವರು ಸಾವಿರ ಕಿಮೀಗಳಷ್ಟು ನಡೆಯಲೇ  ಬೇಕಾಗಿದೆ. ಅವರ ನೋವು, ದುಃಖವನ್ನು ಇಡೀ ದೇಶ ಕಂಡಿದೆ ಆದರೆ ಸರ್ಕಾರಕ್ಕೆ ಮಾತ್ರ ಕಾಣುತ್ತಿಲ್ಲ ಎಂದು ಸೋನಿಯಾ ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

ಹಾಗಾಗಿ ಭಾರತದ ಜನರ ದನಿ ಗಟ್ಟಿಯಾಗಿ ಕೇಳಿಸುವಂತೆ ಮಾಡಲು ನಾವು ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನವನ್ನು ಆರಂಭಿಸಿದ್ದೇವೆ. ಕೇಂದ್ರ ಸರ್ಕಾರ ತಮ್ಮ ಖಜಾನೆ ತೆರೆದು ಅಗತ್ಯವಿರುವವರಿಗೆ ಸಹಾಯ ನೀಡಬೇಕು ಎಂದು ಒತ್ತಾಯಿಸುತ್ತಿದ್ದೇನೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಸಂಕಷ್ಟದಲ್ಲಿರುವ ಬಡವರಿಗೆ ಮುಂದಿನ 6 ತಿಂಗಳುಗಳವರೆಗೆ ಪ್ರತಿ ದಿನ ₹ 7,500 ಹಣ ವರ್ಗಾವಣೆ ಮಾಡಿ ಎಂದು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯಿಸಿದ್ದಾರೆ.

ಮನೆಗೆ ಸುರಕ್ಷಿತವಾಗಿ ತಲುಪಲು ಎಲ್ಲ ವಲಸೆ ಕಾರ್ಮಿಕರಿಗೆ ವಾಹನದ ವ್ಯವಸ್ಥೆ ಮಾಡಿಕೊಡಬೇಕು. ಮನರೇಗಾದಲ್ಲಿ ಕೆಲಸದ ದಿನವನ್ನು 200 ಆಗಿ ಏರಿಕೆ ಮಾಡಿ. ಬಡವರಿಗೆ ಮತ್ತು ಸಣ್ಣ ಕೈಗಾರಿಕೆಗಳಿಗೆ ಬೆಂಬಲ ನೀಡಲು ತಕ್ಷಣ ₹ 10,000  ಆರ್ಥಿಕ ಪ್ಯಾಕೇಜ್ ನೀಡಿ ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಮುಖ್ಯಮಂತ್ರಿಗಳಾದ ಭೂಪೇಶ್ ಬಘೇಲ್, ವಿ.ನಾರಾಯಣ ಸ್ವಾಮಿ ಮತ್ತು ಅಮರಿಂದರ್ ಸಿಂಗ್ ಕೂಡಾ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ಸಂದೇಶ ಪೋಸ್ಟ್ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು