ಭಾನುವಾರ, ಡಿಸೆಂಬರ್ 8, 2019
20 °C

ಪವಾರ್– -ಸೇನಾದ ರಾವತ್‌ ಭೇಟಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಶಿವಸೇನಾ ವಕ್ತಾರ ಸಂಜಯ್ ರಾವತ್ ಅವರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಗುರುವಾರ ಸಂಜೆ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದು ಸೌಜನ್ಯದ ಭೇಟಿ ಎಂದು ಮೂಲಗಳು ಹೇಳಿವೆ. ಆದರೆ, ಸರ್ಕಾರ ರಚನೆಯಲ್ಲಿ ಬಿಜೆಪಿ ಮತ್ತು ಶಿವಸೇನಾ ಒಮ್ಮತಕ್ಕೆ ಬರದಿರುವ ಕಾರಣ ಈ ಭೇಟಿ ರಾಜಕೀಯವಾಗಿ ಮಹತ್ವ ಪಡೆದಿದೆ.

ಗುರುವಾರ ಬೆಳಿಗ್ಗೆ ಮಹಾರಾಷ್ಟ್ರ ಕಾಂಗ್ರೆಸ್‌ನ ಅಧ್ಯಕ್ಷ ಬಾಳಾಸಾಹೇಬ್ ತೋರಟ್, ಕಾಂಗ್ರೆಸ್‌ನ ಮಾಜಿ ಮುಖ್ಯಮಂತ್ರಿಗಳಾದ ಅಶೋಕ್ ಚವಾಣ್ ಮತ್ತು ಪೃಥ್ವಿರಾಜ್ ಚವಾಣ್ ಅವರು ಶರದ್‌ ಪವಾರ್ ಅವರನ್ನು, ಅವರ ಮನೆಯಲ್ಲಿ ಭೇಟಿ ಮಾಡಿದ್ದರು. ಸರ್ಕಾರ ರಚನೆಗೆ ಹಕ್ಕು ಮಂಡನೆಯಲ್ಲಿ ವಿಳಂಬ ಆಗುತ್ತಿರುವ ಸಂಬಂಧ ಕಾಂಗ್ರೆಸ್‌ ಮತ್ತು ಎನ್‌ಸಿಪಿಯ ನಡೆ ಏನಾಗಿರಬೇಕು ಎಂಬುದನ್ನು ಈ ಭೇಟಿ ವೇಳೆ ಚರ್ಚಿಸಲಾಗಿದೆ.

ಶಿಂಧೆ ಶಾಸಕಾಂಗ ಪಕ್ಷದ ನಾಯಕ:  ಶಿವಸೇನಾ ಶಾಸಕಾಂಗ ಪಕ್ಷದ ನಾಯಕ ನಾಗಿ ಏಕನಾಥ್ ಶಿಂಧೆ ಅವರನ್ನು ಆಯ್ಕೆ ಮಾಡಲಾಗಿದೆ. ಆದಿತ್ಯ ಠಾಕ್ರೆ, ಶಿಂಧೆ ಅವರು ಇದ್ದ ಶಿವಸೇನಾ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು